ಸೋಮವಾರ, ಮಾರ್ಚ್ 27, 2023
33 °C

ರಾಷ್ಟ್ರಪತಿ ಚುನಾವಣೆ: ಬೆಂಗಳೂರಿಗೆ ಆಗಮಿಸಿದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದ್ರೌಪದಿ ಮುರ್ಮು ಬೆಂಗಳೂರಿಗೆ ಭಾನುವಾರ ಮಧ್ಯಾಹ್ನ ಬಂದಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಸೇರಿದಂತೆ ಇತರ ನಾಯಕರು ಇದ್ದರು.

ನಂತರ ಅವರು ನಗರದ ಶಾಂಗ್ರೀಲಾ ಹೋಟೆಲ್‌ಗೆ ತೆರಳಿದರು. ಈ ವೇಳೆ ಆದಿವಾಸಿ ಕಲಾತಂಡಗಳು ಅವರನ್ನು ಭರಮಾಡಿಕೊಂಡರು.

ಶಾಂಗ್ರೀಲಾ ಹೋಟೆಲ್‌ನಲ್ಲಿ ಮುರ್ಮು ಅವರು ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ಅವರು ತಮ್ಮ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಬಳಿಕ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಮಂಡ್ಯ ಸಂಸದೆ ಸುಮಲತಾ ಅವರನ್ನೂ ಭೇಟಿಮಾಡಿ ಬೆಂಬಲ ಕೋರುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಇದೇ ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು