ಬೆಂಗಳೂರು: ‘ಪ್ರತಿ ಎಕರೆಗೆ ₹ 250ರಂತೆ ಗರಿಷ್ಠ ಐದು ಎಕರೆಗೆ ₹ 1,250 ಅನ್ನು ಡಿಬಿಟಿ (ನೇರ ನಗದು ವರ್ಗಾವಣೆ) ಮೂಲಕ ಡೀಸೆಲ್‌ಗೆ ಸಹಾಯಧನ ನೀಡುವ ‘ರೈತ ಶಕ್ತಿ ಯೋಜನೆ’ಗೆ ಇದೇ ತಿಂಗಳ ಅಂತ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ‘45 ಲಕ್ಷಕ್ಕೂ ಹೆಚ್ಚು ರೈತರ ಖಾತೆಗೆ ಮುಖ್ಯಮಂತ್ರಿ ಸಹಾಯಧನ ಬಿಡುಗಡೆ ಮಾಡಲಿದ್ದಾರೆ’ ಎಂದಿದ್ದಾರೆ.

‘ಇಲಾಖೆಯ ಎಲ್ಲ ಯೋಜನೆಗಳನ್ನು ‘ಫ್ರುಟ್ಸ್’ ವೆಬ್‌ಸೈಟ್ ಮೂಲಕ ರೈತರ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕ ಅನುಷ್ಠಾನ ಮಾಡಲಾಗುತ್ತಿದೆ. ಈ ವೆಬ್‌ಸೈಟ್‌ನಲ್ಲಿ ನೋಂದಾಯಿಸಿದ ಎಲ್ಲ ರೈತರಿಗೆ ರೈತ ಶಕ್ತಿ ಯೋಜನೆಯನ್ನು ಕೂಡಾ ಇದೇ ತಂತ್ರಾಂಶ ಬಳಸಿ ಅನುಷ್ಠಾನ ಮಾಡಲಾಗುತ್ತಿದೆ. ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿ ಸುವ ಅಗತ್ಯವಿಲ್ಲ. ವೆಬ್‌ಸೈಟ್‌ನಲ್ಲಿ ಲಭ್ಯವಿ ರುವ ದತ್ತಾಂಶಗಳ ಆಧಾರದಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗುವುದು. ವೆಬ್‌ಸೈಟ್‌ನಲ್ಲಿ ನಮೂದಿಸಿದ ಕೃಷಿ ಭೂಮಿಯ ವಿಸ್ತೀರ್ಣದ ಆಧಾರದಲ್ಲಿ ರೈತರ ಖಾತೆಗೆ ಡೀಸೆಲ್ ಸಹಾಯಧನ ವರ್ಗಾಯಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.