ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರೋನ್‌ ಆಧಾರಿತ ಭೂಮಾಪನ ಕಾರ್ಯ ಮತ್ತೆ ಆರಂಭ

Last Updated 16 ಮಾರ್ಚ್ 2022, 21:57 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಡ್ರೋನ್‌ ಆಧಾರಿತ ಮರು ಭೂಮಾಪನ ಕಾರ್ಯವನ್ನು ಮತ್ತೆ ಆರಂಭಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ರಾಜ್ಯದಲ್ಲಿ 2017–18ರಲ್ಲಿ ರಾಮನಗರ, ತುಮಕೂರು, ಹಾಸನ, ಬೆಳಗಾವಿ, ಉತ್ತರ ಕನ್ನಡ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿನ ಒಟ್ಟು 51 ಸಾವಿರ ಚದರ ಕಿ.ಮೀ. ಪ್ರದೇಶವನ್ನು ಡ್ರೋನ್‌ ಆಧಾರಿತ ಭೂಮಾಪನ ಕಾರ್ಯವನ್ನು ಭಾರತೀಯ ಸರ್ವೇಕ್ಷಣಾ ಸಂಸ್ಥೆಯ ಸಹಯೋಗದೊಂದಿಗೆ ಕೈಗೊಳ್ಳಲಾಗಿತ್ತು. ಆದರೆ, ಕೋವಿಡ್‌ನಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು’ ಎಂದರು.

‘2ನೇ ಹಂತದಲ್ಲಿ 26 ಜಿಲ್ಲೆಗಳಲ್ಲಿನ 1.40 ಲಕ್ಷ ಚದರ ಕಿ.ಮೀ. ಪ್ರದೇಶವನ್ನು ಸಹ ಡ್ರೋನ್‌ ಸರ್ವೇ ಕಾರ್ಯವನ್ನು ₹287 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT