ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔಷಧ ನಿಯಂತ್ರಣ ಇಲಾಖೆಯಲ್ಲಿ ‘ವಾರ್‌ ರೂಂ’

Last Updated 21 ಏಪ್ರಿಲ್ 2021, 10:08 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಪೀಡಿತರ ಚಿಕಿತ್ಸೆಗೆ ಬಳಸುವ ‘ರೆಮ್‌ಡಿಸಿವಿರ್‌’ ಚುಚ್ಚುಮದ್ದು ಹಾಗೂ ವೈದ್ಯಕೀಯ ಆಮ್ಲಜನಕದ ಅವಶ್ಯಕತೆ ಮತ್ತು ಲಭ್ಯತೆಯ ಕುರಿತು ಮಾಹಿತಿ ಸಂಗ್ರಹಿಸಲು ಹಾಗೂ ಒದಗಿಸಲು ಕರ್ನಾಟಕ ಔಷಧ ನಿಯಂತ್ರಣ ಇಲಾಖೆಯು ‘ವಾರ್‌ ರೂಂ’ ಆರಂಭಿಸಿದೆ.

‘ಕೊರೊನಾ ಎರಡನೇ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೋವಿಡ್‌ ಪ್ರಕರಣಗಳೂ ಏರುಗತಿಯಲ್ಲಿ ಸಾಗಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ‘ರೆಮ್‌ಡಿಸಿವಿರ್‌’ ಚುಚ್ಚುಮದ್ದು ಹಾಗೂ ವೈದ್ಯಕೀಯ ಆಮ್ಲಜನಕದ ಅವಶ್ಯಕತೆ ಹೆಚ್ಚಿದೆ. ಇವುಗಳನ್ನು ಸಕಾಲದಲ್ಲಿ ಒದಗಿಸುವ ಮೂಲಕ ಕೋವಿಡ್‌ ರೋಗಿಗಳ ಚಿಕಿತ್ಸೆಗೆ ನೆರವಾಗಬೇಕಿದೆ. ಈ ಉದ್ದೇಶದಿಂದ ಇಲಾಖೆಯ ಕೇಂದ್ರ ಕಚೇರಿಯಲ್ಲಿ ‘ವಾರ್‌ ರೂಂ’ ಆರಂಭಿಸಲಾಗಿದೆ. ಇಲಾಖೆಯ ಅಧಿಕಾರಿ ಹಾಗೂ ನೌಕರರನ್ನು ಮೂರು ತಂಡಗಳನ್ನಾಗಿ ವಿಭಾಗಿಸಲಾಗಿದೆ. ಇವರು ಪಾಳಿ ಮಾದರಿಯಲ್ಲಿ ಕೆಲಸ ಮಾಡಲಿದ್ದಾರೆ’ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

‘ಮೊದಲನೇ ಪಾಳಿಯವರು ಬೆಳಿಗ್ಗೆ 6ರಿಂದ ಮಧ್ಯಾಹ್ನ 2, ಎರಡನೇ ಪಾಳಿಯವರು ಮಧ್ಯಾಹ್ನ 2ರಿಂದ ರಾತ್ರಿ 10 ಹಾಗೂ ಮೂರನೇ ಪಾಳಿಯವರು ರಾತ್ರಿ 10ರಿಂದ ಮರುದಿನ ಬೆಳಿಗ್ಗೆ 6ರವರೆಗೆ ಕಾರ್ಯನಿರ್ವಹಿಸಲಿದ್ದಾರೆ. ಇದು ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ’ ಎಂದೂ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT