ಸೋಮವಾರ, ಡಿಸೆಂಬರ್ 6, 2021
24 °C

ಶಾಸಕ ಜಮೀರ್ ಅಹಮ್ಮದ್ ದೂರು: ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಬಗ್ಗೆ ಅಪಪ್ರಚಾರ ಮಾಡಿದ್ದ ಹಾಗೂ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಪ್ರಶಾಂತ್ ಸಂಬರಗಿ ವಿರುದ್ಧ ಚಾಮರಾಜಪೇಟೆಯಲ್ಲಿ ಎಫ್ಐಆರ್ ದಾಖಲಾಗಿದೆ.

'ಶಾಸಕ ಜಮೀರ್ ಅವರು ನೀಡಿದ್ದ ದೂರಿನಡಿ ಎನ್‌ಸಿಆರ್ (ಗಂಭೀರವಲ್ಲದ ಅಪರಾಧ) ದಾಖಲಾಗಿತ್ತು. ಇದೀಗ 24 ಎಸಿಎಂಎಂ ನ್ಯಾಯಾಲಯದ ನಿರ್ದೇಶನದಂತೆ ಸಂಬರಗಿ ವಿರುದ್ಧ ಪ್ರಕರಣ ದಾಖಲಾಗಿದೆ' ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.

'ಕ್ರಿಮಿನಲ್ ಪಿತೂರಿ (ಐಪಿಸಿ 120 (ಬಿ), ಜೀವ ಬೆದರಿಕೆ (ಐಪಿಸಿ 506), ಫೋರ್ಜರಿ (ಐಪಿಸಿ 463) ಹಾಗೂ ಸಹಿ ನಕಲು ಮಾಡಿದ (ಐಪಿಸಿ 465) ಆರೋಪದಡಿ ಸಂಬರಗಿ ಎಫ್ಐಆರ್ ದಾಖಲಾಗಿದೆ' ಎಂದೂ ತಿಳಿಸಿದರು.

ದೂರಿನಲ್ಲಿ ಏನಿತ್ತು?

‘ನನ್ನ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಪ್ರಶಾಂತ್ ಸಂಬರಗಿ ಅವರು ಗೌರವಕ್ಕೆ ಚ್ಯುತಿ ತರುತ್ತಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಬೆದರಿಕೆ ಹಾಕುತ್ತಿದ್ದಾರೆ' ಎಂದು ಆರೋಪಿಸಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಪೊಲೀಸರಿಗೆ ದೂರು ನೀಡಿದ್ದರು.

‘ಸುಖಾಸುಮ್ಮನೇ ಹೇಳಿಕೆ ನೀಡಿ ಅಪಪ್ರಚಾರ ಮಾಡುತ್ತಿರುವ ಹಾಗೂ ಸಂಬಂಧವಿಲ್ಲದ ವಿಷಯದಲ್ಲಿ ನನ್ನ ಹೆಸರು ಎಳೆದು ತರುತ್ತಿರುವ ಸಂಬರಗಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದೂ ಜಮೀರ್ ಅವರು ಒತ್ತಾಯಿಸಿದ್ದರು.  

ಸರಣಿ ಟ್ವೀಟ್‌ ಮಾಡಿದ ಶಾಸಕ ಜಮೀರ್‌ ಅಹಮ್ಮದ್ ಖಾನ್ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು