ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿದ್ದ ಆರೋಪದಡಿ ಚಿನ್ನದ ವ್ಯಾಪಾರಿ ವೈಭವ್ ಜೈನ್ ಎಂಬಾತನನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 11ಕ್ಕೆ ಏರಿದೆ.

‘ಮೋಜು–ಮಸ್ತಿಗಾಗಿ ಪಾರ್ಟಿಗಳಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿದ್ದ ವೈಭವ್, ಆಫ್ರಿಕಾ ಪ್ರಜೆಗಳ ಪರಿಚಯವಾಗಿ ಡ್ರಗ್ಸ್ ಮಾರಾಟದ ಬಗ್ಗೆ ತಿಳಿದುಕೊಂಡಿದ್ದ. 2018ರಲ್ಲಿ ಪಾರ್ಟಿಯೊಂದರಲ್ಲಿ ಆತನಿಗೆ ದೆಹಲಿಯ ವಿರೇನ್ ಖನ್ನಾ ಪರಿಚಯವಾಗಿತ್ತು. ಬಳಿಕವೇ ಜಾಲದಲ್ಲಿ ಸಕ್ರಿಯನಾಗಿದ್ದನೆಂಬ ಮಾಹಿತಿ ಇದೆ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.

‘ತನಿಖೆಯ ಆರಂಭದಲ್ಲಿ ವೈಭವ್ ಮಾಹಿತಿ ಸಿಕ್ಕಿತ್ತು. ಆದರೆ, ಆತನಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಮನೆಯಲ್ಲೇ ಆತ ಚಿಕಿತ್ಸೆ ಪಡೆಯುತ್ತಿದ್ದ. ಗುಣಮುಖವಾಗುತ್ತಿದ್ದಂತೆ ಆತನನ್ನು ಬಂಧಿಸಿ, ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.