ಶುಕ್ರವಾರ, ಫೆಬ್ರವರಿ 26, 2021
32 °C

ಡ್ರಗ್ಸ್‌ ಪ್ರಕರಣ: ಜೈಲಿನಿಂದ ಹೊರಬಂದ ನಟಿ ರಾಗಿಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣದಡಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದ ನಟಿ ರಾಗಿಣಿ ದ್ವಿವೇದಿ, ಜಾಮೀನು ಮೇಲೆ ಸೋಮವಾರ ಜೈಲಿನಿಂದ ಹೊರಬಂದಿದ್ದಾರೆ.

ಕಾಟನ್‌ಪೇಟೆ ಠಾಣೆಯಲ್ಲಿ ದಾಖ ಲಾಗಿದ್ದ ಪ್ರಕರಣದಲ್ಲಿ ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಜಾಮೀನು ಕೋರಿ ರಾಗಿಣಿ ಸಲ್ಲಿಸಿದ್ದ ಅರ್ಜಿಗಳನ್ನು ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಹಾಗೂ ಹೈಕೋರ್ಟ್‌ ವಜಾ ಮಾಡಿತ್ತು. ಬಳಿಕ ಅವರು, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೇ ಅವರಿಗೆ ಜಾಮೀನು ಮಂಜೂ ರಾಗಿತ್ತು.

145 ಜೈಲುವಾಸದ ನಂತರ ಹೊರಬಂದು ಸುದ್ದಿಗಾರರ ಜೊತೆ ಮಾತನಾಡಿದ ರಾಗಿಣಿ, ‘ನ್ಯಾಯಾಂಗದ ಬಗ್ಗೆ ನನಗೆ ನಂಬಿಕೆ ಇದೆ. ಇವತ್ತು ನನ್ನ ಪಾಲಿಗೆ ನಿಜವಾದ ಸತ್ಯಮೇವ ಜಯತೇ. ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ಗೆ ನನ್ನ ಧನ್ಯವಾದಗಳು’ ಎಂದರು.

‘ನನಗೆ ಹಾಗೂ ನನ್ನ ಕುಟುಂಬಕ್ಕೆ ಆಶೀರ್ವಾದವಿದೆ. ಸತ್ಯ ಏನೆಂಬುದು ಈಗ ಗೊತ್ತಾಗಿದೆ. ಸದ್ಯದಲ್ಲೇ ಪತ್ರಿಕಾಗೋಷ್ಠಿ ಮಾಡಿ ಮತ್ತಷ್ಟು ಮಾತನಾಡುತ್ತೇನೆ’ ಎಂದೂ ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು