ಮಂಗಳವಾರ, ಆಗಸ್ಟ್ 16, 2022
29 °C

ಡ್ರಗ್ಸ್‌ ಪ್ರಕರಣ| ನಟಿ ಸಂಜನಾ ಗಲ್ರಾನಿಗೆ ಷರತ್ತುಬದ್ಧ ಜಾಮೀನು

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದ ಆರೋಪಿ ನಟಿ ಸಂಜನಾ ಗಿಲ್ರಾನಿ ಅವರಿಗೆ ವೈದ್ಯಕೀಯ ಪ್ರಮಾಣ ಪತ್ರ ಆಧರಿಸಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸಂಜನಾ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಹೊಸದಾಗಿ ಅರ್ಜಿ ಸಲ್ಲಿಸಿದ ಸಂಜನಾ, ವೈದ್ಯಕೀಯ ಕಾರಣಗಳನ್ನು  ನೀಡಿದ್ದರು. ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ತಪಾಸಣೆ ನಡೆಸಿ ವರದಿ ಸಲ್ಲಿಸುವಂತೆ ವಾಣಿ ವಿಲಾಸ ಆಸ್ಪತ್ರೆಗೆ ಹೈಕೋರ್ಟ್ ಪೀಠ ಸೂಚನೆ ನೀಡಿತ್ತು. ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂಬ ವರದಿ ಆಧರಿಸಿ ಜಾಮೀನು ಮಂಜೂರು ಮಾಡಿದೆ. ₹3 ಲಕ್ಷ ಮೌಲ್ಯದ ಭದ್ರತಾ ಠೇವಣಿ ಮತ್ತು ಇಬ್ಬರ ಜಾಮೀನು ಪಡೆದು ಸಂಜನಾ ಬಿಡುಗಡೆ ಮಾಡುವಂತೆ ಕಾರಾಗೃಹದ ಅಧಿಕಾರಿಗಳಿಗೆ ನ್ಯಾಯ ಮೂರ್ತಿ ಶ್ರೀನಿವಾಸ್ ಹರೀಶ್‌ ಕುಮಾರ್ ಆದೇಶಿಸಿದರು.

ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಸಂಜನಾ ಅವರನ್ನು ಸೆಪ್ಟೆಂಬರ್‌ನಲ್ಲಿ ಬಂಧಿಸಲಾಗಿತ್ತು. ಸೆಪ್ಟೆಂಬರ್ 29ರಂದು ವಿಚಾರಣಾ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿ ಸಿತ್ತು. ನ.3ರಂದು ಹೈಕೋರ್ಟ್ ಕೂಡ ಜಾಮೀನು ಅರ್ಜಿ ವಜಾಗೊಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು