ಡ್ರಗ್ಸ್ ಪ್ರಕರಣ: ಆದಿತ್ಯ ಆಳ್ವ ರೆಸಾರ್ಟ್ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಡ್ರಗ್ಸ್ ದಂಧೆಯ ಪ್ರಮುಖ ಆರೋಪಿ ಆದಿತ್ಯ ಆಳ್ವಗೆ ಸೇರಿದ ರೆಸಾರ್ಟ್ ಮೇಲೆ ಸಿಸಿಬಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.
ನ್ಯಾಯಾಲಯದಿಂದ ವಾರೆಂಟ್ ಪಡೆದು ಹೆಬ್ಬಾಳದಲ್ಲಿರುವ ಹೌಸ್ ಆಫ್ ಲೈಫ್ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದಾರೆ.
ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರನಾಗಿರುವ ಆದಿತ್ಯ, ಡ್ರಗ್ಸ್ ಪ್ರಕರಣದಲ್ಲಿ ಎ6 ಆರೋಪಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ.
ಸಿಸಿಬಿ ಇನ್ಸ್‌ಪೆಕ್ಟರ್‌ಗಳಾದ ಅಂಜುಮಾಲಾ ನಾಯಕ್, ಹರೀಶ್, ಪುನೀತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ರೆಸಾರ್ಟ್‌ನಲ್ಲಿ ಕೆಲಸದವರು ಮಾತ್ರ ಇದ್ದರು. ವಾರೆಂಟ್ ತೋರಿಸಿ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ.
ಆದಿತ್ಯಾ ಆಳ್ವ ಮ್ಯಾನೇಜರ್ ಆಗಿರುವ ರಾಮದಾಸ್‌ನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.