ಬುಧವಾರ, ಅಕ್ಟೋಬರ್ 28, 2020
24 °C

ಡ್ರಗ್ಸ್ ಜಾಲ; ಮತ್ತೊಬ್ಬ ಪೆಡ್ಲರ್ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಪೆಡ್ಲರ್ ಒಸ್ಸೆ ಎಂಬಾತನನ್ನು ಶುಕ್ರವಾರ ಬಂಧಿಸಿದ್ದಾರೆ.

‘ನೈಜೀರಿಯಾದ ಒಸ್ಸೆ, ನಗರದಲ್ಲಿ ವಾಸವಿದ್ದುಕೊಂಡು ಕೆಲ ಪಾರ್ಟಿಗಳಿಗೆ ಹಾಗೂ ಗ್ರಾಹಕರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಪ್ರಕರಣದಡಿ ಬಂಧಿಸಲಾಗಿರುವ ಆರೋಪಿಗಳು ನೀಡಿದ್ದ ಹೇಳಿಕೆ ಆಧರಿಸಿ ಆತನನ್ನು ಬಂಧಿಸಲಾಗಿದೆ’ ಎಂದು ಸಿಸಿಬಿಯ ಅಧಿಕಾರಿಯೊಬ್ಬರು ಹೇಳಿದರು.

‘ಅಂತರರಾಷ್ಟ್ರೀಯ ಡ್ರಗ್ಸ್ ಜಾಲದ ಬಗ್ಗೆ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡ್ರಗ್ಸ್ ಪೆಡ್ಲರ್‌ಗಳಾದ ಲೋಮ್ ಪೆಪ್ಪರ್ ಹಾಗೂ ಸಿಮೋನ್ ಎಂಬುವರನ್ನು ಬಂಧಿಸಿ, ಡ್ರಗ್ಸ್ ಜಪ್ತಿ ಮಾಡಲಾಗಿತ್ತು. ಅವರಿಬ್ಬರ ಜೊತೆಯಲ್ಲೂ ಒಸ್ಸೆ ಸಂಪರ್ಕವಿಟ್ಟುಕೊಂಡು ಡ್ರಗ್ಸ್ ದಂಧೆ ನಡೆಸುತ್ತಿದ್ದ.’

‘ಗೋವಾ ಹಾಗೂ ಮುಂಬೈನಿಂದ ಕಳ್ಳ ಸಾಗಣೆ ಮೂಲಕ ಡ್ರಗ್ಸ್ ನಗರಕ್ಕೆ ಬರುತ್ತಿತ್ತು. ಅದನ್ನೇ ಆರೋಪಿ ಒಸ್ಸೆ, ಪರಿಚಯಸ್ಥ ಗ್ರಾಹಕರಿಗೆ ಹಾಗೂ ಉಪ ಪೆಡ್ಲರ್‌ಗಳಿಗೆ ಕೊಡುತ್ತಿದ್ದ. ಡ್ರಗ್ಸ್ ಜಾಲ ಪ್ರಕರಣದ ಬಹುತೇಕ ಆರೋಪಿಗಳಿಗೂ ಒಸ್ಸೆ ಡ್ರಗ್ಸ್ ಸರಬರಾಜು ಮಾಡಿದ್ದು ತನಿಖೆಯಿಂದ ಗೊತ್ತಾಗಿದೆ. ಈ ಬಗ್ಗೆ ಆತನೇ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಹೇಳಿದರು.

ಮಾಹಿತಿ ಸಂಗ್ರಹ; ‘ಒಸ್ಸೆ ಕಡೆಯಿಂದ ಡ್ರಗ್ಸ್ ಖರೀದಿಸಿದ್ದ ಗ್ರಾಹಕರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದೂ ಅಧಿಕಾರಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.