ಸೋಮವಾರ, ಆಗಸ್ಟ್ 15, 2022
23 °C

ಬರೀ ಹೆಣ್ಣು ಮಕ್ಕಳನೇ ಫಿಕ್ಸ್‌ ಮಾಡಲಾಗುತ್ತಿದೆ: ವಿಶ್ವನಾಥ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಡ್ರಗ್ಸ್‌ ದಂಧೆಯಲ್ಲಿ ಬರೀ ಚಿತ್ರರಂಗದವರನ್ನೇ, ಅದರಲ್ಲೂ ಹೆಣ್ಣು ಮಕ್ಕಳನ್ನೇ ಫಿಕ್ಸ್‌ ಮಾಡಲಾಗುತ್ತಿದೆ. ಈ ಬಗ್ಗೆ ನನಗೆ ವಿಷಾದವಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಬುಧವಾರ ಇಲ್ಲಿ ತಿಳಿಸಿದರು.

ಇಷ್ಟವಿಲ್ಲದ ಹಲವಾರು ಕೆಲಸಗಳನ್ನು ಮಾಡುವಂತೆ ಹೆಣ್ಣು ಮಕ್ಕಳ ಮೇಲೆ ಒತ್ತಡಗಳು ಬರುತ್ತಿವೆ. ಹೀಗಾಗಿ, ಇಂಥ ಕೃತ್ಯಗಳಿಗೆ ಮೊರೆ ಹೋಗುತ್ತಿದ್ದಾರೆ ಎಂದರು.

‘ಪೊಲೀಸರಿಗೆ ಎಲ್ಲಾ ವಿಚಾರ ಗೊತ್ತಿದೆ. ಗಾಂಜಾ, ಪಾರ್ಟಿ, ಅಫೀಮು ಹೊಸ ವಿಚಾರವೇನಲ್ಲ. ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಏನು ನಡೆಯುತ್ತಿದೆ ಎಂಬುದು ಚೆನ್ನಾಗಿ ಗೊತ್ತಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು