ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗಜೀವನ್‌ ರಾಂ ಜಯಂತಿ ವೇಳೆ ಪ್ರತಿಭಟನೆ

ದಿಢೀರ್‌ ಹೋರಾಟದಿಂದ ಮುಖ್ಯಮಂತ್ರಿಗೆ ಮುಜುಗರ
Last Updated 5 ಏಪ್ರಿಲ್ 2021, 16:19 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್‌ ರಾಂ ಜನ್ಮದಿನಾಚರಣೆ ವೇಳೆ ದಲಿತ ಸಂಘಟನೆಗಳ ಸದಸ್ಯರು ದಿಢೀರ್‌ ಪ್ರತಿಭಟನೆ ನಡೆಸಿದ್ದರಿಂದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಇರಿಸು ಮುರಿಸು ಅನುಭವಿಸಿದ ಘಟನೆ ಸೋಮವಾರ ನಡೆಯಿತು.

ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಇರುವ ಜಗಜೀವನ್‌ ರಾಂ ಪ್ರತಿಮೆಗೆ ಮಾಲಾರ್ಪಣೆ ಮತ್ತು ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿತ್ತು. ಬೆಳಿಗ್ಗೆ 10 ಗಂಟೆಗೆ ಯಡಿಯೂರಪ್ಪ ಅಧಿಕಾರಿಗಳ ಜತೆ ಸ್ಥಳಕ್ಕೆ ಬಂದರು. ಆಗ ರಾಮನಗರ ಮತ್ತು ಮಾಗಡಿ ತಾಲ್ಲೂಕಿನಿಂದ ಬಂದಿದ್ದ ದಲಿತ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.

‘ಮಾಗಡಿಯಲ್ಲಿ ಜಗಜೀವನ್‌ ರಾಂ ಭವನ ನಿರ್ಮಾಣ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ಕಾಡುಗೋಡಿಯಲ್ಲಿ ಪರಿಶಿಷ್ಟ ಜಾತಿಯ ಜನರ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧ ಸೂಕ್ತ ಕ್ರ ಜರುಗಿಸಿಲ್ಲ’ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರನ್ನು ಬದಲಾವಣೆ ಮಾಡುವಂತೆಯೂ ಆಗ್ರಹಿಸಿದರು.

ಜಗಜೀವನ್‌ ರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಹೊರಟಿದ್ದ ಮುಖ್ಯಮಂತ್ರಿ, ಪ್ರತಿಭಟನೆಯಿಂದ ಗಲಿಬಿಲಿಗೊಂಡರು. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು. ಸಮಸ್ಯೆಗಳ ಪರಿಹಾರ ಮಾಡುವುದಾಗಿ ಮನವೊಲಿಸಿದರು. ನಂತರ ಯಡಿಯೂರಪ್ಪ ಅವರು ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT