ಮಂಗಳವಾರ, ಆಗಸ್ಟ್ 3, 2021
24 °C

ಡಿಪ್ಲೊಮಾ ವಿದ್ಯಾರ್ಥಿಗಳ ಕೌಶಲ ವೃದ್ಧಿಗೆ ಒಪ್ಪಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿಪ್ಲೊಮಾ ವಿದ್ಯಾರ್ಥಿಗಳಲ್ಲಿ ಕೌಶಲ ಅಭಿವೃದ್ಧಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯು ಬೆಂಗಳೂರು ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆ (ಬಿಸಿಐಸಿ) ಜತೆ ಒಪ್ಪಂದ ಮಾಡಿಕೊಂಡಿದೆ.

ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅವರ ಉಪಸ್ಥಿತಿಯಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್‌ ಮತ್ತು ಬಿಸಿಐಸಿ ಅಧ್ಯಕ್ಷ ಟಿ.ಆರ್‌. ಪರಶುರಾಮನ್‌ ಶುಕ್ರವಾರ ಒಪ್ಪಂದಕ್ಕೆ ಸಹಿ ಹಾಕಿದರು.

ಉದ್ಯೋಗ, ಉದ್ಯಮಶೀಲತೆ, ಸಂಶೋಧನೆ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಈ ಒಪ್ಪಂದದಲ್ಲಿ ಅವಕಾಶ ಕಲ್ಪಿಸಲಾಗಿದೆ. ಡಿಪ್ಲೊಮಾ ವಿದ್ಯಾರ್ಥಿಗಳಲ್ಲಿ ಕೌಶಲ ಅಭಿವೃದ್ಧಿಗಾಗಿ ‘ಬಿಸಿಐಸಿ–ಡಿಟಿಇ ಕೇಸ್‌ ಸೆಂಟರ್‘ ಸ್ಥಾಪನೆ, ಆರು ತಿಂಗಳ ಅವಧಿಗೆ ‘ಇಂಟರ್ನ್‌ಶಿಪ್‌’ ಕಾರ್ಯಕ್ರಮ ಮತ್ತಿತರ ಯೋಜನೆಗಳು ಒಪ್ಪಂದದ ಭಾಗವಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು