ಶನಿವಾರ, ಅಕ್ಟೋಬರ್ 1, 2022
23 °C

ಜಂಬೂ ಸವಾರಿ ಮೆರವಣಿಗೆ: ಕಲಾ ತಂಡಗಳಿಂದ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಾಡಹಬ್ಬ ದಸರೆಯ ‘ಜಂಬೂ ಸವಾರಿ’ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ರಾಜ್ಯದ ಎಲ್ಲ ಜಿಲ್ಲೆಗಳ ಸಾಂಸ್ಕೃತಿಕ ಹಾಗೂ ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅ.5ರ ವಿಜಯದಶಮಿಯಂದು ಮೆರವಣಿಗೆ ನಡೆಯಲಿದ್ದು, ತಂಡದ ಭಾವಚಿತ್ರ, ವಿಳಾಸ, ಮೊಬೈಲ್‌ ಸಂಖ್ಯೆ ಹಾಗೂ ಸದಸ್ಯರ ವಿವರವಿರುವ ಅರ್ಜಿಯನ್ನು ಸೆ.10ರೊಳಗೆ ‘ಉಪ ವಿಶೇಷಾಧಿಕಾರಿಗಳು, ದಸರಾ ಮೆರವಣಿಗೆ ಉಪಸಮಿತಿ ಹಾಗೂ ಪೊಲೀಸ್‌ ಆಯುಕ್ತರು, ಮೈಸೂರು ನಗರ’ ಅಥವಾ ‘ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು’– ಈ ವಿಳಾಸಕ್ಕೆ ಸಲ್ಲಿಸಬೇಕು. 

ಅರ್ಜಿ ಸಲ್ಲಿಸಿದ ಕಲಾತಂಡಗಳ ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಘಟಕದಿಂದ ರಚಿಸಲಾದ ತಜ್ಞರ ಸಮಿತಿ ನಿರ್ಧರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು