ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ‘ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಮಾ. 6ರಿಂದ 8ರ ನಡುವೆ ಅಕಾಲಿಕ ಮಳೆಯಾಗಿದ್ದು, ಬೆಳೆ ಹಾನಿಗೂ ಕಾರಣವಾಗಿದೆ. ದೇಶದ ಉತ್ತರ ಹಾಗೂ ಕೇಂದ್ರ ಭಾಗದಲ್ಲಿ ಮಾರ್ಚ್ 15ರ ತನಕ ಹಗುರವಾದ ಮಳೆಯಾಗಲಿದೆ. ಮಾರ್ಚ್ 16ರಿಂದ 22ರ ತನಕ ದೇಶದ ದಕ್ಷಿಣ ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.
1901ರ ಬಳಿಕ ಕಳೆದ ಫೆಬ್ರುವರಿಯು ಅತ್ಯಂತ ಬಿಸಿಲಿ ನಿಂದ ಕೂಡಿತ್ತು. ಈ ರೀತಿ ಹವಾ ಮಾನ ವಾತಾವರಣದಿಂದ ಮುಂಗಾರು ಪೂರ್ವ ಮಳೆಗೆ ಅವಧಿಗೂ ಮುನ್ನವೇ ಬರಲಿದೆ’ ಎಂದು ತಜ್ಞರು ಹೇಳುತ್ತಾರೆ.
‘ಸಾಮಾನ್ಯವಾಗಿ ಮುಂಗಾರು ಪೂರ್ವ ಮಾರುತಗಳು ಮಾರ್ಚ್ ಮಧ್ಯದಲ್ಲಿ ರಚನೆಯಾಗುತ್ತವೆ. ಈ ವರ್ಷ ಬೇಗ ಸೃಷ್ಟಿಯಾಗಿವೆ. ಹೆಚ್ಚಿರುವ ಉಷ್ಣಾಂಶವು ಇದಕ್ಕೆ ಕಾರಣವಾಗಿದೆ’ ಎಂದು ಸ್ಕೈಮೆಟ್‌ನ ಹವಾಮಾನ ತಜ್ಞ ಮಹೇಶ್ ಮಲಾವತ್ ಹೇಳುತ್ತಾರೆ.
‘ಫೆಬ್ರುವರಿಯಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ವಾತಾವರಣದ ಮೇಲೆ ಪರಿಣಾಮ ಬೀರಲಿದೆ. ಪೂರ್ವ ಮುಂಗಾರು ಮಳೆ ಬೇಗ ಸುರಿಯುವುದರಿಂದ ವಾತಾವರಣ ತಂಪಾಗಲಿದೆ. ಆದರೆ, ಮುಂಗಾರು ಪ್ರವೇಶ ವಿಳಂಬವಾಗುವ ಸಾಧ್ಯತೆಯಿದೆ’ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಆರ್.ಎಚ್.ಪಾಟೀಲ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.