ಶನಿವಾರ, ನವೆಂಬರ್ 28, 2020
18 °C

₹ 1.3 ಕೋಟಿ ಮೌಲ್ಯದ ಆಸ್ತಿ ಇ.ಡಿ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಾರಿ ನಿರ್ದೇಶನಾಲಯ

ಬೆಂಗಳೂರು: ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಹಣವನ್ನು ವರ್ಗಾಯಿಸಿ, ವಂಚಿಸಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ವಿಜಯ ಬ್ಯಾಂಕ್‌ನ ಮಾಜಿ ಹಿರಿಯ ಪ್ರಬಂಧಕ ಬಿ.ವೈ. ಶ್ರೀನಿವಾಸ್‌ ಮತ್ತು ಇತರರ ₹ 1.30 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ಆರೋಪಿಗಳು ಕರಕುಶಲ ಅಭಿವೃದ್ಧಿ ನಿಗಮದ ಹಣವನ್ನು ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಆರೋಪಿಗಳಿಗೆ ಸಂಬಂಧಿಸಿದ ಜಮೀನು, ಕಟ್ಟಡ ಮತ್ತು ಬ್ಯಾಂಕ್‌ ಖಾತೆಗಳಲ್ಲಿದ್ದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು