ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಾನತ್‌ ಬ್ಯಾಂಕ್‌ ಹಗರಣ: ಇ.ಡಿಯಿಂದ ಆರೋಪಪಟ್ಟಿ

Last Updated 2 ಏಪ್ರಿಲ್ 2023, 7:31 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಅಮಾನತ್‌ ಸಹಕಾರ ಬ್ಯಾಂಕ್‌ನಿಂದ ₹ 68.43 ಕೋಟಿ ಸಾಲ ಪಡೆದು ವಂಚಿಸಿದ ಆರೋಪದಡಿ ಮೊಹಮ್ಮದ್ ಅಸಾದುಲ್ಲಾ, ಅವರ ನೇತೃತ್ವದ ಅಲ್‌–ಅಮೀನ್‌ ಹೌಸಿಂಗ್‌ ಡೆವಲಪ್‌ಮೆಂಟ್‌ ಕಂಪನಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.

1985ರಿಂದ 2002ರ ಅವಧಿಯಲ್ಲಿ ಅಸ್ತಿತ್ವದಲ್ಲೇ ಇಲ್ಲದ ವ್ಯಕ್ತಿಗಳು ಹಾಗೂ ಅನುಮಾನಾಸ್ಪದ ಖಾತೆಗಳಿಗೆ ಸಾಲ ಮಂಜೂರು ಮಾಡಿರುವುದು ಮತ್ತು ಅಕ್ರಮವಾಗಿ ಚೆಕ್‌ಗಳನ್ನು ನಗದೀಕರಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆಯ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಿದ್ದರು. ಬಳಿಕ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದ್ದು, 2006ರಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಪೊಲೀಸರ ವರದಿ ಆಧರಿಸಿ ಇ.ಡಿ ಅಧಿಕಾರಿಗಳು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಪ್ರತ್ಯೇಕ ಪ್ರಕರಣ ದಾಖಲಿಸಿದ್ದರು.

ಕಂಪನಿಯ ಹೆಸರಿನಲ್ಲಿ ಸಾಲ ಪಡೆದು ವೈಯಕ್ತಿಕ ಉದ್ದೇಶಕ್ಕೆ ಬಳಸಿಕೊಂಡು ಬ್ಯಾಂಕ್‌ಗೆ ನಷ್ಟ ಉಂಟುಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಮೊಹಮ್ಮದ್ ಅಸಾದುಲ್ಲಾ ಮತ್ತು ಇತರರಿಗೆ ಸೇರಿದ ₹ 243.93 ಕೋಟಿ ಮಾರುಕಟ್ಟೆ ಮೌಲ್ಯದ ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಇ.ಡಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT