ಶನಿವಾರ, ಸೆಪ್ಟೆಂಬರ್ 25, 2021
29 °C

ರೋಷನ್ ಬೇಗ್ ಮನೆ ಮೇಲೆ ಇ.ಡಿ. ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.

ಶಿವಾಜಿನಗರದಲ್ಲಿನ ಅವರ ಮನೆ ಸೇರಿ 6 ಕಡೆಗಳಲ್ಲಿ ಬೆಳಿಗ್ಗೆಯಿಂದಲೇ ಇ.ಡಿ. ಅಧಿಕಾರಿಗಳು ಶೋಧ ಆರಂಭಿಸಿದ್ದಾರೆ. ಸಿಆರ್‌ಪಿಎಫ್ ಪೊಲೀಸರ ಭದ್ರತೆ ಪಡೆದು ದಾಳಿ ನಡೆಸಲಾಗಿದೆ. ‌

ಐ ಮಾನಿಟರಿ ಅಡ್ವೈಸರಿ (ಐಎಂಎ) ಹಗರಣದಲ್ಲಿ ರೋಷನ್ ಬೇಗ್ ಆಸ್ತಿ ಜಪ್ತಿ ಮಾಡುವಂತೆ ರಾಜ್ಯ ಸರ್ಕಾರದ ಸಕ್ಷಮ ಪ್ರಾಧಿಕಾರಕ್ಕೆ ಹೈಕೋರ್ಟ್‌ ಆದೇಶ ನೀಡಿತ್ತು. ಅದನ್ನು ಆಧರಿಸಿ ಆಸ್ತಿ ಮುಟ್ಟುಗೋಲಿಗೆ ಸರ್ಕಾರ ಕೂಡ ಆದೇಶ ಹೊರಡಿಸಿತ್ತು. ಇದೆಲ್ಲದರ ನಡುವೆ ಅಕ್ರಮ ವಿದೇಶಿ ವ್ಯವಹಾರ ಕಂಡು ಬಂದಿರುವುದರಿಂದ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು