ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಅಕ್ರಮ: ಎಡಿಜಿಪಿ, ಡಿವೈಎಸ್ಪಿ ಮನೆಗಳ ಮೇಲೆ ಇ.ಡಿ ದಾಳಿ

Last Updated 10 ನವೆಂಬರ್ 2022, 14:09 IST
ಅಕ್ಷರ ಗಾತ್ರ

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಾದ ಎಡಿಜಿಪಿ ಅಮ್ರಿತ್ ಪೌಲ್ ಹಾಗೂ ಡಿವೈಎಸ್ಪಿ ಶಾಂತಕುಮಾರ್ ಮನೆಗಳು ಸೇರಿದಂತೆ 11 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

‘ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮ್ರಿತ್ ಪೌಲ್ ಹಾಗೂ ಡಿವೈಎಸ್ಪಿ ಶಾಂತಕುಮಾರ್, ವಿಭಾಗದ ಸಿಬ್ಬಂದಿ ಮೂಲಕ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು. ಅಭ್ಯರ್ಥಿಗಳ ಒಎಂಆರ್ ಪ್ರತಿ ತಿದ್ದಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರು ಬರುವಂತೆ ನೋಡಿಕೊಂಡಿದ್ದರು’ ಎಂಬುದು ಸಿಐಡಿ ತನಿಖೆಯಿಂದ ಪತ್ತೆಯಾಗಿತ್ತು.

ಅಕ್ರಮದಲ್ಲಿ ನೂರಾರು ಕೋಟಿ ರೂಪಾಯಿ ಕೈ ಬದಲಾಗಿರುವ ಬಗ್ಗೆ ಸಿಐಡಿ ತನಿಖಾ ತಂಡದಿಂದ ಮಾಹಿತಿ ಸಂಗ್ರಹಿಸಿದ್ದ ಇ.ಡಿ ಅಧಿಕಾರಿಗಳು, ಇಬ್ಬರ ಮನೆಗಳ ಮೇಲೂ ಏಕಕಾಲದಲ್ಲಿ ಮಾಡಿದ್ದಾರೆ. ಇದರ ಜೊತೆಗೆ, ಇತರೆ ಆರೋಪಿಗಳ 9 ಸ್ಥಳಗಳಲ್ಲೂ ಶೋಧ ನಡೆಸುತ್ತಿದ್ದಾರೆ.

ಸಹಕಾರನಗರದಲ್ಲಿರುವ ಅಮ್ರಿತ್ ಪೌಲ್ ಮನೆ ಹಾಗೂ ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್‌ನಲ್ಲಿರುವ ಶಾಂತಕುಮಾರ್ ಮನೆಯಲ್ಲಿ ಬೆಳಿಗ್ಗೆ 11 ಗಂಟೆಯಂದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ರಾತ್ರಿಯೂ ಪರಿಶೀಲನೆ ಮುಂದುವರಿದಿದೆ. ಸ್ಥಳೀಯ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT