ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9, 10ನೇ ತರಗತಿ ಮಕ್ಕಳಿಗೂ ಮೊಟ್ಟೆ

Last Updated 14 ಮಾರ್ಚ್ 2023, 23:06 IST
ಅಕ್ಷರ ಗಾತ್ರ

ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದಿಂದ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೂ ಬೇಯಿಸಿದ ಮೊಟ್ಟೆ ವಿತರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.

ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆದಿದ್ದು, 2023ರ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲು ಅನುಮೋದನೆ ಪಡೆಯಲು ಕಸರತ್ತು ನಡೆದಿದೆ.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯ ಭಾಗವಾಗಿ ವಾರದಲ್ಲಿ ಎರಡು ದಿನ ಮೊಟ್ಟೆ ನೀಡಲಾಗುತ್ತಿದೆ. ಈ ಯೋಜನೆಯನ್ನು 9 ಹಾಗೂ 10ನೇ ತರಗತಿಗೂ ವಿಸ್ತರಿಸಬೇಕು ಎಂದು ಪೋಷಕರು ಒತ್ತಾಯಿಸುತ್ತಾ ಬಂದಿದ್ದರು.

ಈ ಯೋಜನೆಯನ್ನು 2021ರಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಜಾರಿಗೆ ತರಲಾಯಿತು. ನಂತರ ರಾಜ್ಯದ ಇತರೆ ಶಾಲೆಗಳ 1ರಿಂದ 8ನೇ ತರಗತಿಯ ಮಕ್ಕಳಿಗೆ ವಿಸ್ತರಿಸಲಾಯಿತು. ಇಲಾಖೆಯ ಸಮೀಕ್ಷೆಯ ಪ್ರಕಾರ ಶೇ 70ರಷ್ಟು ಮಕ್ಕಳು ಮಧ್ಯಾಹ್ನದ ಬಿಸಿಯೂಟದ ಜತೆಗೆ ಮೊಟ್ಟೆ ಆಯ್ಕೆ ಮಾಡಿಕೊಂಡಿದ್ದಾರೆ.

ಸುಮಾರು 60 ಲಕ್ಷ ವಿದ್ಯಾರ್ಥಿಗಳಿಗೆ ಬೇಯಿಸಿದ ಮೊಟ್ಟೆಗಳನ್ನು ಪೂರೈಸಲಾಗುತ್ತಿದೆ. ಯೋಜನೆ ಮುಂದುವರಿದರೆ ವರ್ಷಕ್ಕೆ ₹ 300 ಕೋಟಿ ವೆಚ್ಚವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT