ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ 6ರಿಂದ 8ನೇ ತರಗತಿಗಳನ್ನು ಇದೇ 6ರಿಂದ ಆರಂಭಿಸುವ ಸಂಬಂಧವೇಳಾಪಟ್ಟಿ ಸಹಿತ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

ಶಾಲಾ ಮಕ್ಕಳ ಭೌತಿಕ ತರಗತಿಗೆ ಅನುಗುಣವಾಗಿ ಪ್ರತಿ ಶಾಲೆಯಲ್ಲೂ ತಂಡ ರಚಿಸಬೇಕು. ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಪ್ರತ್ಯೇಕವಾಗಿರುವ ಕಡೆಗಳಲ್ಲಿ 6ರಿಂದ 8ನೇ ತರಗತಿಗಳನ್ನು ಬೆಳಿಗ್ಗೆ (10 ಗಂಟೆಯಿಂದ 1.30ರವರೆಗೆ) ನಡೆಸಬೇಕು.

ಪ್ರೌಢ ಶಾಲೆಯ ಜೊತೆಗೆ 8ನೇ ತರಗತಿ ಇರುವ ಶಾಲೆಗಳಲ್ಲಿ 8ನೇ ತರಗತಿಯನ್ನು ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.30ರವರೆಗೆ 45 ನಿಮಿಷಗಳ ಮೂರು ಅವಧಿ ನಡೆಸಬೇಕು ಎಂದು ಇಲಾಖೆ ಸಲಹೆ ನೀಡಿದೆ.

ಅಂತರ ಕಾಪಾಡಿಕೊಳ್ಳಲು ಅನುಕೂಲ ಆಗುವಂತೆ ಪ್ರತಿ ಶಾಲೆಯಲ್ಲೂ ಮಕ್ಕಳ ಸಂಖ್ಯೆಗೆ ಅನುಗುಣವಾಗಿ 15ರಿಂದ 20 ಮಕ್ಕಳನ್ನು ಒಳಗೊಂಡಿರುವ ತಂಡ ರಚಿಸಬೇಕು. ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ತಾಲ್ಲೂಕು, ವಲಯಗಳಲ್ಲಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಶಾಲೆ ಆರಂಭಿಸಬೇಕು ಎಂದು ಸೂಚಿಸಿದೆ.

ಶಾಲೆಗಳಲ್ಲಿ ಹಾಜರಾತಿ ಕಡ್ಡಾಯವಲ್ಲ. ಬದಲಾಗಿ ಆನ್‌ಲೈನ್ ಅಥವಾ ಭೌತಿಕ ತರಗತಿಗಳಲ್ಲಿ ಯಾವುದಾದರು ಒಂದು ವ್ಯವಸ್ಥೆಯಲ್ಲಿ ಮಕ್ಕಳು ಕಲಿಕೆ ಮುಂದುವರಿಸಬೇಕು. ಈ ಹಿಂದೆ ನೀಡಿರುವ ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದೂ ಇಲಾಖೆ ನಿರ್ದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.