ಇಲಾಖೆಯ ಕುರಿತು ಅಗತ್ಯ ಮಾಹಿತಿ ಒದಗಿಸುವಶಾಲಾ ಶಿಕ್ಷಣ ಸಚಿವರ ಜಾಲತಾಣ school educationminister.karnataka.gov.in ಪೋರ್ಟಲ್‌ಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಸಹ ಭೇಟಿ ನೀಡಿ, ದೂರು, ಸಲಹೆ , ಅಭಿಪ್ರಾಯ ನೀಡಬಹುದು. ಪೋರ್ಟಲ್ ಮೂಲಕ ಸಲ್ಲಿಕೆಯಾಗುವ ದೂರುಗಳನ್ನು ಶೀಘ್ರ ಪರಿಹರಿಸುವ, ದೂರಿನ ಸ್ಥಿತಿ-ಗತಿಗಳನ್ನು ಆನ್‌ಲೈನ್ ಮೂಲಕವೇ ಟ್ರ್ಯಾಕ್ ಮಾಡುವ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ.ವೆಬ್ ಪೋರ್ಟಲ್‌ನಲ್ಲಿ ರಾಜ್ಯದ ಶಾಲೆಗಳ ಸಂಖ್ಯೆ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಂಖ್ಯೆ, ಮಧ್ಯಾಹ್ನದ ಬಿಸಿಯೂಟ ಯೋಜನೆ ಸೇರಿದಂತೆ ಎಲ್ಲ ವಿವರ ಒದಗಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.