ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್‌ನಿಂದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ನೌಕರರು ಮೃತಪಟ್ಟಿದ್ದರೆ, ಅವರ ಅವಲಂಬಿತರಿಗೆ ತಕ್ಷಣ ಪರಿಹಾರ ಮಂಜೂರು ಮಾಡಬೇಕು’ ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ಸೂಚಿಸಿದ್ದಾರೆ.

‘ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಮತ್ತು ಇತರ ಕರ್ತವ್ಯದ ಮೇಲೆ ಸಕ್ಷಮ ಪ್ರಾಧಿಕಾರದಿಂದ (ಜಿಲ್ಲಾಧಿಕಾರಿ) ನಿಯೋಜನೆಗೊಂಡು ಇಲಾಖೆಯ ಅಧಿಕಾರಿಗಳು, ನೌಕರರು ಮತ್ತು ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಕರ್ತವ್ಯನಿರತ ಸಮಯದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ ನಿಯಮಾನುಸಾರ ಪರಿಹಾರ ಮಂಜೂರು ಮಾಡಬೇಕಾಗಿರುವುದು ನಿಮ್ಮ ಜವಾಬ್ದಾರಿ’ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ. ಪರಿಹಾರ ನೀಡಿರುವ ಬಗ್ಗೆ ಮಾಹಿತಿಯನ್ನೂ ಒದಗಿಸಬೇಕು ಎಂದೂ ಕೋರಿದ್ದಾರೆ.

ಕೋವಿಡ್‌ನಿಂದ ಮೃತಪಟ್ಟ ಇಲಾಖೆಯ ಸಿಬ್ಬಂದಿಗೆ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಿರಂತರವಾಗಿ ಮನವಿ ಮಾಡಿತ್ತು. ಇದಕ್ಕೆ ಮಣಿದು ಇಲಾಖೆ ಈ ಕ್ರಮ ತೆಗೆದುಕೊಂಡಿದೆ’ ಎಂದ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮತ್ತು ಚಂದ್ರಶೇಖರ ನುಗ್ಗಲಿ ಹೇಳಿದ್ದಾರೆ.

ಇದನ್ನೂ ಓದಿ... ಶೇ 75ರಷ್ಟು ಹಾಸಿಗೆ ಕೋವಿಡ್ ರೋಗಿಗಳಿಗೆ ಬಳಕೆಯಾಗಲಿ: ಸಚಿವ ಡಾ.ಕೆ.ಸುಧಾಕರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.