ಮಂಗಳವಾರ, ಜೂನ್ 28, 2022
26 °C

ಸೋಂಕು ಕಡಿಮೆಯಾಗದಿದ್ದರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯೂ ರದ್ದು: ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಕೋವಿಡ್ ಪ್ರಮಾಣ ಕಡಿಮೆಯಾಗಿ ಎಲ್ಲವೂ ಸಾಮಾನ್ಯ ಸ್ಥಿತಿಗೆ ಮರಳಿದರೆ ಮಾತ್ರ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಡೆಸಲಾಗುವುದು. ಇಲ್ಲವಾದಲ್ಲಿ ಅದನ್ನೂ ರದ್ದುಪಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ರದ್ದು ಮಾಡಲಾಗಿರುವ ಬಗ್ಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ವಿವರಣೆ ನೀಡಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ನಿರ್ಧರಿಸಲಾಗುವುದು. ಈ ವಿಷಯದಲ್ಲಿ ಏನೂ ಗೊಂದಲವಿಲ್ಲ’ ಎಂದರು.

ಇದನ್ನೂ ಓದಿ: 

‘ನಾನು ಸುರೇಶ್ ಕುಮಾರ್ ಜೊತೆ ಮಾತನಾಡಿದ್ದೇನೆ. ಪರಿಸ್ಥಿತಿ ಸುಧಾರಣೆ ಆದರೆ ಮಾತ್ರ ಒಂದೆರಡು ದಿನಗಳಲ್ಲಿ ಪರೀಕ್ಷೆ ಮಾಡುತ್ತೇವೆ ಎಂದಿದ್ದಾರೆ. ಮಕ್ಕಳಿಗೆ ಏನೂ ತೊಂದರೆ ಆಗುವುದಿಲ್ಲ. ಪೋಷಕರು ಕೂಡ ಗೊಂದಲಕ್ಕೆ ಒಳಗಾಗುವುದು ಬೇಡ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು