ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ: ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ– ನಾಗೇಶ್

Last Updated 19 ಏಪ್ರಿಲ್ 2022, 7:32 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಇದೇ 22ರಿಂದ ಆರಂಭವಾಗಲಿದ್ದು, ಹಿಜಾಬ್ ಸೇರಿ ಯಾವುದೇ ಧರ್ಮಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಈ ಬಾರಿ ಒಟ್ಟು 6,84,255ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಒಟ್ಟು 1076ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿಂದಿನ ಅನುಭವಗಳ ಆಧಾರದಲ್ಲಿ ಸೋರಿಕೆ ತಡೆಗೆ ಕ್ರಮ ವಹಿಸಲಾಗಿದೆ. ಅಕ್ರಮ ತಡೆಯಲು 2152 ಜಾಗೃತದಳ, 858ತಾಲ್ಲೂಕು ಜಾಗೃತ ದಳ ಮತ್ತು 64ಜಿಲ್ಲಾ ಜಾಗೃತ ದಳ ಕಾರ್ಯ ನಿರ್ವಹಿಸಲಿವೆ.

ಪರೀಕ್ಷಾ ಕೇಂದ್ರದ ಸುತ್ತ 200ಮೀಟರ್ ಪ್ರದೇಶದಲ್ಲಿ 144ನೇ ಸೆಕ್ಷನ್ ವಿಧಿಸಲಾಗುವುದು ಎಂದು ನಾಗೇಶ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT