ಕುವೆಂಪು ಪಾಠ ಇರುವ 4ನೇ ತರಗತಿ ಪಠ್ಯಪುಸ್ತಕದ ಪರಿಷ್ಕರಣೆ ಆಗಿಲ್ಲ: ಬಿ.ಸಿ. ನಾಗೇಶ್

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಕುರಿತು ಪಾಠ ಇರುವ 4ನೇ ತರಗತಿ 'ಪರಿಸರ ಅಧ್ಯಯನ' ಪುಸ್ತಕದ ಪರಿಷ್ಕರಣೆ ಆಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರದ ಜನಪರ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಪಕ್ಷದ ಮುಖಂಡರು ದಿನಕ್ಕೊಂದು ಸುಳ್ಳು ಹೇಳಿ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ. ಸುಳ್ಳನ್ನು ಎಷ್ಟು ಸಲ ಹೇಳಿದರೂ ಸತ್ಯವಾಗದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ಪರಿಷ್ಕರಿಸಿದ್ದು, ಕುವೆಂಪು ಅವರ ಬಗ್ಗೆ ಇದ್ದ ವಿಷಯಾಂಶವನ್ನು ಕೈಬಿಡಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ. ವಾಸ್ತವವಾಗಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು 4ನೇ ತರಗತಿಯ ಪಠ್ಯವನ್ನು ಪರಿಷ್ಕರಿಸುವುದಿಲ್ಲ ಎಂದು ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ಕುರಿತು ಪಾಠ ಇರುವ 4ನೇ ತರಗತಿ 'ಪರಿಸರ ಅಧ್ಯಯನ' ಪುಸ್ತಕದ ಪರಿಷ್ಕರಣೆ ಆಗಿಲ್ಲ.
ರಾಜ್ಯ @BJP4Karnataka ಸರ್ಕಾರದ ಜನಪರ ಕಾರ್ಯಗಳನ್ನು ಸಹಿಸದ ಕಾಂಗ್ರೆಸ್ ಪಕ್ಷದ ಮುಖಂಡರು ದಿನಕ್ಕೊಂದು ಸುಳ್ಳು ಹೇಳಿ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ.
ಸುಳ್ಳನ್ನು ಎಷ್ಟು ಸಲ ಹೇಳಿದರು ಸತ್ಯವಾಗದು ! pic.twitter.com/8oXgofvbda
— B.C Nagesh (@BCNagesh_bjp) May 24, 2022
ಬರಗೂರು ರಾಮಚಂದ್ರಪ್ಪ ಸಮಿತಿಯು 2017–18ರಲ್ಲಿ ಪರಿಷ್ಕರಿಸಿದ್ದ 4ನೇ ತರಗತಿಯ ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲಿ ಪ್ರತಿಯೊಬ್ಬರೂ ವಿಶಿಷ್ಟ ಎಂಬ ಪಾಠದಲ್ಲಿ ‘ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ’ಎಂಬ ಶೀರ್ಷಿಕೆ ಅಡಿಯಲ್ಲಿ ಇದ್ದ 9 ಸಾಲುಗಳ ವಿಷಯಾಂಶವನ್ನು 2022–23ನೇ ಸಾಲಿನ ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲೂ ಮುಂದುವರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇವನ್ನೂ ಓದಿ...
ರೋಹಿತ್ ಚಕ್ರತೀರ್ಥ ಐಐಟಿ ಪ್ರೊಫೆಸರ್: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಕೈತಪ್ಪಿದ ಟಿಕೆಟ್: ಸೌಜನ್ಯದಿಂದ ವರ್ತಿಸುವಂತೆ ಬೆಂಬಲಿಗರಿಗೆ ವಿಜಯೇಂದ್ರ ಮನವಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.