ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಾಹ್ನದ ಬಿಸಿಯೂಟಕ್ಕೆ ಶೇಂಗಾ ಚಿಕ್ಕಿ ನೀಡಲು ನಿರ್ಧಾರ

Last Updated 13 ಡಿಸೆಂಬರ್ 2021, 22:07 IST
ಅಕ್ಷರ ಗಾತ್ರ

ಬೆಂಗಳೂರು: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜತೆಗೆ ಶೇಂಗಾ ಚಿಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ.

ಮೊಟ್ಟೆ ಸೇವಿಸದವರಿಗೆ ಬಾಳೆ ಹಣ್ಣು ನೀಡಲಾಗುತ್ತಿತ್ತು. ಆದರೆ, ಪೌಷ್ಟಿಕಾಂಶ ವಿಷಯದಲ್ಲಿ ಬಾಳೆ ಹಣ್ಣಿಗೆ ಮೊಟ್ಟೆ ಸಮವಲ್ಲ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿರುವುದರಿಂದ ಸರ್ಕಾರ ಶೇಂಗಾ ಚಿಕ್ಕಿ ನೀಡಲು ನಿರ್ಧರಿಸಿದೆ.

‘ಸದ್ಯಕ್ಕೆ ಚಿಕ್ಕಿ ಮತ್ತು ಬಾಳೆಹಣ್ಣು ವಿತರಿಸಲಾಗುವುದು. ಎರಡರಲ್ಲಿ ಒಂದನ್ನು ವಿದ್ಯಾರ್ಥಿಗಳೇ ಆಯ್ಕೆ ಮಾಡಿಕೊಳ್ಳಬೇಕು. ಬೇಡಿಕೆ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

‘ಈಗಾಗಲೇ ಶೇಂಗಾ ಚಿಕ್ಕಿ ನೀಡುವ ಕುರಿತು ಕರ್ನಾಟಕ ಹಾಲು ಒಕ್ಕೂಟದ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗಿದೆ. ವಿದ್ಯಾರ್ಥಿಗಳಿಗೆ ವಿತರಿಸುವ ಮುನ್ನ ಪೌಷ್ಟಿಕಾಂಶಗಳ ಬಗ್ಗೆ ಶೇಂಗಾ ಚಿಕ್ಕಿಯನ್ನು ವಿವಿಧ ಪರೀಕ್ಷೆಗಳನ್ನು ಒಳಪಡಿಸಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT