ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳ ಆರಂಭ: ಬಿ.ಸಿ. ನಾಗೇಶ್

ಬೆಂಗಳೂರು: ಮೇ 16 ರಿಂದ ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ಶಾಲೆಗಳು ಪುನರಾರಂಭ ಆಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಶಾಲೆಗಳಲ್ಲಿ ತರಗತಿಗಳು ಸರಿಯಾಗಿ ನಡೆದಿಲ್ಲ. ಕಲಿಕೆಯಲ್ಲಿನ ಹಿನ್ನಡೆಯನ್ನು ನಿವಾರಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಯೋಜನೆಯನ್ನು ಇತರ ರಾಜ್ಯಗಳೂ ಅನುಸರಿಸುತ್ತಿವೆ ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲೆಗಳಿಗೆ ಸೀಮಿತವಾಗಿ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಸುತ್ತಿದೆ. ಖಾಸಗಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳೂ ಈ ಕಾರ್ಯಕ್ರಮ ಅನುಷ್ಠಾನಗೊಳಿಸಲು ಬಯಸಿದರೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಮೂರನೇ ವಾರ ಫಲಿತಾಂಶ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಅಂತಿಮ ಹಂತದಲ್ಲಿದೆ. ಮೇ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.