ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಪುಸ್ತಕ ಪರಿಷ್ಕರಣೆ: ಸರ್ಕಾರದ ನಿಲುವು ಸ್ಪಷ್ಟ– ಸಚಿವ ಬಿ.ಸಿ. ನಾಗೇಶ್‌

Last Updated 18 ಜೂನ್ 2022, 9:33 IST
ಅಕ್ಷರ ಗಾತ್ರ

ಬೆಂಗಳೂರು: ‘ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗಿದೆ. ಪ್ರತಿಭಟನೆ ಮಾಡುವವರಿಗೆ ಸ್ವಾತಂತ್ರ್ಯ ಇದೆ. ಈ ಹಿಂದೆಯೂ ಪ್ರತಿಭಟನೆಗಳು ನಡೆದಿವೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿದರು.

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ‘ಪಠ್ಯಪುಸ್ತಕ ಪರಿಷ್ಕರಣೆ ವಿಷಯದಲ್ಲಿ ಸರ್ಕಾರ ಈಗಾಗಲೇ ಸ್ಪಷ್ಟನೆ ನೀಡಿದೆ. ಪರಿಷ್ಕರಣೆಯ ಬಳಿಕ ವ್ಯಕ್ತವಾದ ಆಕ್ಷೇಪಣೆ, ಗೊಂದಲಗಳನ್ನು ಪರಿಗಣಿಸಿ ಮರು ಪರಿಷ್ಕರಣೆ ವಿಚಾರದಲ್ಲಿ ಒಂದು ತಿಂಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದರು.

‘ಪಠ್ಯ ಪುಸ್ತಕ ಶೇ 92ರಷ್ಟು ಮುದ್ರಣವಾಗಿದೆ. ಆ ಪೈಕಿ, ಶೇ 79ರಷ್ಟು ಈಗಾಗಲೇ ಶಾಲೆಗಳಿಗೆ ತಲುಪಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯೂ ಸೇರಿದಂತೆ ಸುತ್ತಮುತ್ತಲಿನ ಕೆಲವು ಶಾಲೆಗಳಿಗೆ ಶೇ 100ರಷ್ಟು ತಲುಪಿವೆ. ಜುಲೈ 15ರ ಒಳಗೆ ಎಲ್ಲ ಶಾಲೆಗಳಿಗೆ ಪಠ್ಯಪುಸ್ತಕ ಪೂರೈಕೆ ಆಗಲಿದೆ’ ಎಂದು ಅವರು ವಿವರಿಸಿದರು.

ವಿಧಾನ ಪ‍ರಿಷತ್‌ಗೆ ಆಯ್ಕೆಯಾದ ಬಸವರಾಜ ಹೊರಟ್ಟಿ ಅವರನ್ನು ಶಿಕ್ಷಣ ಸಚಿವರಾಗಿ ಮಾಡುವ ಬಗ್ಗೆ ವದಂತಿ ಹರಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ಬಗ್ಗೆ ನೋ ಕಮೆಂಟ್ಸ್‌. ನಾನು ಯಾವುದಕ್ಕೂ ಆಸೆ ಪಟ್ಟವನಲ್ಲ. ಬೇಕು ಅಂದವನೂ ಅಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT