ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎರಡು ಪ್ರಶ್ನೆಪತ್ರಿಕೆ ಮೂಲಕ ಪರೀಕ್ಷೆ

Last Updated 4 ಜೂನ್ 2021, 5:28 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಈ ಬಾರಿ ಎರಡು ಪರೀಕ್ಷೆ ನಡೆಸಲಾಗುವುದು. ವಿಜ್ಞಾನ, ಗಣಿತ ಮತ್ತು ಸಮಾಜವಿಜ್ಞಾನದ ಒಂದು ಪತ್ರಿಕೆ, ಭಾಷೆಗಳಿರುವ ಮತ್ತೊಂದು ಪ್ರಶ್ನೆಪತ್ರಿಕೆ ಇರುತ್ತದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಶುಕ್ರವಾರ ಹೇಳಿದರು.

‘ಕಳೆದ ಬಾರಿ 9ನೇ ತರಗತಿಯ ಪರೀಕ್ಷೆಯೂ ನಡೆದಿಲ್ಲ. ಅದರ ಆಧಾರದ ಮೇಲೆ ಅಂಕಗಳನ್ನು ನೀಡಲು ಸಾಧ್ಯವಾಗದ ಕಾರಣ, ಎಸ್ಸೆಸ್ಸೆಲ್ಸಿಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ’ ಎಂದೂ ಹೇಳಿದರು.

‘ಪರೀಕ್ಷೆಯಲ್ಲಿ ಬಹುಆಯ್ಕೆಯ ಪ್ರಶ್ನೆಗಳಿದ್ದು, ನೇರ ಮತ್ತು ಸರಳವಾಗಿರುತ್ತವೆ. ಪ್ರತಿ ವಿಷಯಕ್ಕೆ 40 ಅಂಕಗಳಿರುತ್ತವೆ. ಅಂದರೆ, ಒಂದು ಪತ್ರಿಕೆ 120 ಅಂಕಗಳಿಗೆ ಇದ್ದು, ಮೂರು ಗಂಟೆ ಸಮಯ ನೀಡಲಾಗುತ್ತದೆ’ ಎಂದರು.

‘ವಿದ್ಯಾರ್ಥಿಗಳು ಪಿಯುಸಿಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ ಸೇರಿದಂತೆ ಯಾವುದೇ ಕೋರ್ಸ್‌ ತೆಗೆದುಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಪರೀಕ್ಷೆ ನಡೆಸಲಾಗುತ್ತಿದೆ. ಯಾರನ್ನೇ ಆಗಲಿ ಅನುತ್ತೀರ್ಣಗೊಳಿಸುವ ಉದ್ದೇಶವಿಲ್ಲ. ಎ, ಎ+ ಗ್ರೇಡ್ ನೀಡಲಾಗುತ್ತದೆ’ ಎಂದರು.

‘ಕೋವಿಡ್ ಕಾರಣದಿಂದ ಗೈರಾಗಿದ್ದರೆ ಅಂತಹ ಮಕ್ಕಳಿಗೆ ಮಾತ್ರ ಪೂರಕ ಪರೀಕ್ಷೆ ನಡೆಸಲಾಗುತ್ತದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT