ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.22ರಿಂದ 6ನೇ ತರಗತಿಯಿಂದಲೇ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ: ಸುರೇಶ್‌ಕುಮಾರ್

Last Updated 16 ಫೆಬ್ರುವರಿ 2021, 8:33 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಇದೇ 22ರಿಂದ 6ನೇ ತರಗತಿಯಿಂದಲೇ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭವಾಗಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಬೆಂಗಳೂರು ನಗರ ಮತ್ತು ಕೇರಳದ ಗಡಿ ಭಾಗದಲ್ಲಿ 8ನೇ ತರಗತಿಯಿಂದ ಮೇಲಿನ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ’ ಎಂದರು.

ಅಲ್ಲದೆ, ಕೇರಳದ ಭಾಗದಿಂದ ಬರುವ ಪ್ರತಿಯೊಬ್ಬರ ವಿದ್ಯಾರ್ಥಿ, ಶಿಕ್ಷಕ ಕೋವಿಡ್‌ ಪರೀಕ್ಷೆಗೆ ಒಳಪಡಬೇಕು. ಆ ನೆಗಟಿವ್‌ ವರದಿ ಇದ್ದರೆ ಮಾತ್ರ ತರಗತಿಗೆ ಹಾಜರಾಗಲು ಅನುಮತಿ ನೀಡಲಾಗುವುದು. ಆಯಾ ಶಾಲೆಗಳಲ್ಲಿ ಇರುವ ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳ ಸಂಖ್ಯೆಯನ್ನು ಅವಲಂಬಿಸಿ, ಪಾಳಿಯಲ್ಲಿ ತರಗತಿ ನಡೆಸಲು ಅವಕಾಶವಿದೆ. ಹಾಜರಾತಿ ಕಡ್ಡಾಯ ಇಲ್ಲ’ ಎಂದೂ ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT