ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಶೇ 45.84, ದ್ವಿತೀಯ ಪಿಯು ಶೇ 33.04 ಹಾಜರಿ: ಸುರೇಶ್ ಕುಮಾರ್‌

ಶಾಲಾರಂಭದ 2ನೇ ದಿನ: ವಿದ್ಯಾರ್ಥಿ, ಪೋಷಕರಲ್ಲಿ ಖುಷಿ
Last Updated 2 ಜನವರಿ 2021, 19:45 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿರುವ 16,850 ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,25,896 ವಿದ್ಯಾರ್ಥಿಗಳು (ಶೇ 45.84), 5,492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖ ಲಾಗಿರುವ 3,30,877 ವಿದ್ಯಾರ್ಥಿಗಳ ಪೈಕಿ 1,09,319 ವಿದ್ಯಾರ್ಥಿಗಳು (ಶೇ 33.04) ಶನಿವಾರ ತರಗತಿಗಳಿಗೆ ಹಾಜರಾಗಿದ್ದಾರೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ರಂಭದ ಎರಡನೇ ದಿನವಾದ ಶನಿ ವಾರ ರಾಜ್ಯದೆಲ್ಲೆಡೆ ಶುಕ್ರವಾರಕ್ಕಿಂತ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಹೆಚ್ಚಾಗಿದೆ. ಸುರಕ್ಷತೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭರವಸೆ ಮೂಡಿದೆ’ ಎಂದೂ ಅವರು ಹೇಳಿದ್ದಾರೆ.

‘ಕೆಲವು ಪೋಷಕರು ಮುಂದಿನ ವಾರದಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಬಯಸಿರುವುದರಿಂದ ಸೋಮವಾರದಿಂದ ಶಾಲೆಗಳಲ್ಲಿನ ಹಾಜರಾತಿ ಹೆಚ್ಚಾಗುವ ನಿರೀಕ್ಷೆಯಿದೆ. ಉಳಿದ ತರಗತಿಗಳನ್ನೂ ಆರಂಭಿಸಲು ಪೋಷಕರು ಹೆಚ್ಚಿನ ಒತ್ತಡ ಹೇರು ತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

‘ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪಠ್ಯಗಳನ್ನು ಲಭ್ಯವಾಗಬಹುದಾದ ಶಾಲಾ ಅವಧಿ ಮತ್ತು ಪರೀಕ್ಷೆಗೆ ಅಗತ್ಯವಿರುವಷ್ಟು ನಿಗದಿಪಡಿಸಲಾಗುವುದು. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಹೊರೆಯಾಗದಂತೆ ಪಠ್ಯಕ್ರಮ ಇರಲಿದೆ. ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಶೀಘ್ರ ಪ್ರಕಟಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

ಸಚಿವರ ಭೇಟಿ: ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಯ ಹಲವು ಶಾಲೆಗಳಿಗೆ ಸಚಿವರು ಶನಿವಾರ ಭೇಟಿ ನೀಡಿ, ಪೋಷಕರು ಮತ್ತು ಮಕ್ಕಳ ಜೊತೆ ಶಾಲಾರಂಭದ ಕುರಿತು ಸಂವಾದ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT