ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ನೀತಿ ಜಾರಿ: ರಾಜ್ಯಪಾಲರ ಜತೆ ಡಿಸಿಎಂ ಸಮಾಲೋಚನೆ

Last Updated 28 ಆಗಸ್ಟ್ 2020, 20:31 IST
ಅಕ್ಷರ ಗಾತ್ರ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ಶಿಕ್ಷಣ ನೀತಿಯನ್ನು ಜಾರಿ ಮಾಡುವ ಸಂಬಂಧ ಈವರೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳು, ಕಾರ್ಯಪಡೆ ರಚನೆ, ಆ ಕಾರ್ಯಪಡೆ ಜತೆ ನಡೆಸಿರುವ ಸಭೆಗಳು, ವಿಚಾರ ವಿನಿಮಯ ಇತ್ಯಾದಿ ಸಂಗತಿಗಳ ಬಗ್ಗೆ ರಾಜ್ಯಪಾಲರ ಜತೆ ವಿಚಾರ ವಿನಿಮಯ ಮಾಡಿಕೊಂಡರು.

ನೀತಿಯಲ್ಲಿ ಅಡಕವಾಗಿರುವ ಪ್ರಮುಖ ವಿಷಯಗಳು, ಅವುಗಳ ಜಾರಿಯಿಂದ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಆಗಲಿರುವ ಮಹತ್ವದ ಬದಲಾವಣೆಗಳ ಬಗ್ಗೆಯೂ ಅವರು ರಾಜ್ಯಪಾಲರಿಗೆ ವಿವರಣೆ ನೀಡಿದರಲ್ಲದೆ, ಈ ಸಂಬಂಧ ರಾಜ್ಯ ಸರ್ಕಾರ ತರಲು ಇಚ್ಛಿಸಿರುವ ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಬದಲಾವಣೆಗಳ ಬಗ್ಗೆಯೂ ಮಾಹಿತಿ ನೀಡಿದರು.

ಇದೇ ವೇಳೆ ಶಿಕ್ಷಣ ನೀತಿ ಜಾರಿಗೆ ಕೆಲ ಮಹತ್ವದ ಸಲಹೆಗಳನ್ನು ನೀಡಿದರು. ಶಿಕ್ಷಣನೀತಿ ನಿರೂಪಣಾ ಸಮಿತಿ ಸದಸ್ಯ ಪ್ರೊ. ಅನುರಾಗ್ ಬೆಹರ್ ಅವರಿಂದ ನೀತಿಯಲ್ಲಿರುವ ಮತ್ತಷ್ಟು ಅಂಶಗಳ ಬಗ್ಗೆ ವಿವರಣೆ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT