ಬೆಂಗಳೂರು: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ಶನಿವಾರ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ ಕೃಷ್ಣಾದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳ ಸ್ಥಿತಿ-ಗತಿ ನೋಡಿಕೊಂಡು ಉಳಿದ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಯಲಿದೆ.

ಪರಿಷ್ಕೃತ ಮಾದರಿಯ ವಿದ್ಯಾಗಮ ಯೋಜನೆ ಜಾರಿ ಸಂಬಂಧಿಸಿದಂತೆಯೂ ಚರ್ಚೆ ನಡೆಯಲಿದೆ.

ಶಾಲಾ-ಕಾಲೇಜು ತರಗತಿ ನಡೆಯುವ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದು, ಜ. 1ರಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳು ಆರಂಭವಾಗುವುದು ಬಹುತೇಕ ಖಚಿತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.