ಶುಕ್ರವಾರ, ಜುಲೈ 1, 2022
23 °C

ಆಗಸ್ಟ್‌ 28,29ರಂದು ಸಿಇಟಿ: ಕನಿಷ್ಠ ಅಂಕ ನಿಗದಿ ಕುರಿತು ಶೀಘ್ರ ನಿರ್ಧಾರ -ಡಿಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ʼವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್ ) ರೀತಿಯಲ್ಲಿಯೇ ಕನಿಷ್ಠ ಅಂಕಗಳನ್ನು ನಿಗದಿಪಡಿಸಬಹುದೇ ಎಂಬ ಬಗ್ಗೆ ಶೀಘ್ರ ನಿರ್ಧರಿಸುತ್ತೇವೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪರೀಕ್ಷೆ ಇಲ್ಲದ ಕಾರಣಕ್ಕೆ ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಶೇ 100ರಷ್ಟು ವಿದ್ಯಾರ್ಥಿಗಳು ಪಾಸಾಗಲಿದ್ದಾರೆ. ಹೀಗಾಗಿ, 6.50 ಲಕ್ಷ ವಿದ್ಯಾರ್ಥಿಳು ಪದವಿ ಕೋರ್ಸ್ ಸೇರಲು ಅರ್ಹರಾಗುತ್ತಾರೆ. ಹೀಗೆ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಆಗುವುದರಿಂದ ಪದವಿ ಕೋರ್ಸ್‌ಗೆ ಸೀಟುಗಳ ಸಂಖ್ಯೆ ಹೇಗೆ ಹೆಚ್ಚಿಸಬೇಕು, ಇಲಾಖೆ ಯಾವ ರೀತಿ ತಯಾರಾಗಬೇಕು ಎಂಬ ಬಗ್ಗೆಯೂ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ’ ಎಂದರು.

ಇದನ್ನೂ ಓದಿ: 

‘ವಿಜ್ಞಾನ ವಿಷಯದ ಯಾವುದೇ ಕೋರ್ಸ್‌ಗೂ ಸಿಇಟಿ ಮೂಲಕ ಪ್ರವೇಶ ನೀಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಶೇ 30ರಷ್ಟು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಆಗಲಿದೆ. ಈ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದಂತೆ ಉತ್ತಮ ನಿರ್ಣಯ ತೆಗೆದುಕೊಳ್ಳುತ್ತೇವೆ. ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೇಳಾಪಟ್ಟಿಯನ್ನು ಈಗಾಗಲೇ‌ ಮಾಡಿದ್ದೇವೆ. ಲೌಕ್‌ಡೌನ್‌ ಅನ್‌ಲಾಕ್‌ ಆದ ತಕ್ಷಣ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ಕೊಡುವ ಕೆಲಸವೂ ನಡೆಯಲಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು