ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ: ರಾಜ್ಯದಾದ್ಯಂತ ವಿಸ್ತರಣೆ

ವರ್ಷದಲ್ಲಿ 46 ದಿನಗಳು ಮಾತ್ರ ನೀಡಲು ಹಣಕಾಸು ಇಲಾಖೆ ಅನುಮೋದನೆ
Last Updated 18 ಜುಲೈ 2022, 18:13 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1ರಿಂದ 8ನೇ ತರಗತಿಯ ಮಕ್ಕಳಿಗೆ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡುವ ಯೋಜನೆಗೆ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ.

ಆದರೆ, ವರ್ಷದ 46 ದಿನಗಳು ಮಾತ್ರ ವಿತರಿಸಲು ಇಲಾಖೆ ಅನುಮೋದನೆ ನೀಡಿದೆ. ಕನಿಷ್ಠ 100 ದಿನಗಳ ಕಾಲ ವಿತರಿಸಲು ಅನುಮೋದನೆ ನೀಡುವಂತೆ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿಲ್ಲ.

ರಾಜ್ಯದಲ್ಲಿ 1ರಿಂದ 8ನೇ ತರಗತಿಯಲ್ಲಿನ ಅಂದಾಜು 49 ಲಕ್ಷ ಶಾಲಾ ಮಕ್ಕಳಿಗೆ 100 ದಿನಗಳ ಕಾಲ ಮೊಟ್ಟೆ ಅಥವಾ ಚಿಕ್ಕಿ ವಿತರಿಸಲು ಸುಮಾರು ₹350 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಿ ಆರ್ಥಿಕ ಇಲಾಖೆಯ ಅನು
ಮತಿ ಕೋರಿ ಪ್ರಸ್ತಾವ ಸಲ್ಲಿಸಲಾಗಿತ್ತು.

ಈ ಬಗ್ಗೆ ಜುಲೈ 13ರಂದು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ ಅಭಿಪ್ರಾಯ ತಿಳಿಸಿದ್ದಾರೆ.

46 ದಿನಗಳು ಅಂದರೆ ವಾರದಲ್ಲಿ ಎರಡು ದಿನ ಮಾತ್ರ ಮೊಟ್ಟೆ ನೀಡ
ಬಹುದು. ಸದ್ಯ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ ಈ ಯೋಜನೆ ಜಾರಿಯಲ್ಲಿದೆ. ಪ್ರಧಾನಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆ ಅಡಿ ಕಲ್ಯಾಣ ಕರ್ನಾಟಕದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳಜಿಲ್ಲೆಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿಯ ಅಂದಾಜು 15.29 ಲಕ್ಷ ಮಕ್ಕಳಿಗೆ ಬೇಯಿಸಿದ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲು ವಾರದಲ್ಲಿ ಮೂರು ದಿನ ಮಾತ್ರ ಮಕ್ಕಳಿಗೆ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲಾಗುತ್ತಿತ್ತು. ಈಗ ಎರಡು ದಿನಕ್ಕೊಮ್ಮೆ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಯೋಜನೆಗೆ ಅನುದಾನ ಒದಗಿಸಿದ್ದವು. ಈಗ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಿರುವುದರಿಂದ ರಾಜ್ಯ ಸರ್ಕಾರವೇ ಖರ್ಚು ಭರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಾದ್ಯಂತ ಈ ಯೋಜನೆ ವಿಸ್ತರಿಸುವ ಬಗ್ಗೆ ಕಳೆದ ಎರಡು ತಿಂಗಳಿಂದ ಈ ಪ್ರಕ್ರಿಯೆ ನಡೆಯುತ್ತಿತ್ತು. ಹಣಕಾಸು ಇಲಾಖೆಯ ಒಪ್ಪಿಗೆಗಾಗಿ ಕಾಯಲಾಗುತ್ತಿತ್ತು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT