ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ

Last Updated 8 ಜನವರಿ 2021, 20:26 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಡಿ.ಕೃಷ್ಣಕುಮಾರ್ ಅವರು ರಾಜ್ಯ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ.

1962ರಲ್ಲಿ ಬೇಗೂರು ದಾಸೆಗೌಡ ಮತ್ತು ಹುಚ್ಚಮ್ಮ ದಂಪತಿ ಪುತ್ರರಾಗಿ ಜನಿಸಿದ ಡಿ.ಕೃಷ್ಣಕುಮಾರ್ ತಮ್ಮ ಸಹೋದರ ಮಾಜಿ ಸಚಿವ ಡಿ.ನಾಗರಾಜಯ್ಯ ಮತ್ತು ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಶಿವಣ್ಣ ಅವರ ಗರಡಿಯಲ್ಲಿ ಬೆಳೆದರೂ, ಜೆಡಿಎಸ್ ತೊರೆದು ಬಿಜೆಪಿ ಸೇರಿದವರು. ಮೂರು ಬಾರಿ ಶಾಸಕರಾಗಲು ಯತ್ನಿಸಿ ಸೋಲು ಕಂಡಿದ್ದರು.

ಹಾಲು ಉತ್ಪಾದಕರ ಸಹಕಾರ ಸಂಘ, ರೈತರ ಸೇವಾ ಸಹಕಾರ ಸಂಘ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ಪಿಎಲ್‌ಡಿ ಬ್ಯಾಂಕ್‌ಗೆ 5ನೇ ಬಾರಿಗೆ ಅಧ್ಯಕ್ಷರಾಗಿ ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾಗಿ, ಅಧ್ಯಕ್ಷರಾಗಿ ಮತ್ತು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ತಾಲ್ಲೂಕು ಪಿಎಲ್‌ಡಿ ಬ್ಯಾಂಕ್‌ಗೆ 5ನೇ ಬಾರಿಗೆ ಅಧ್ಯಕ್ಷರಾಗಿದ್ದು, ಜಿಲ್ಲಾ ನಿರ್ದೇಶಕ ಸ್ಥಾನವೂ ಲಾಟರಿ ಮೂಲಕ ಒಲಿದಿದೆ. ಈಗ ರಾಜ್ಯಾಧ್ಯಕ್ಷ ಸ್ಥಾನವೂ ಅವಿರೋಧವಾಗಿ ಒಲಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT