ನವದೆಹಲಿ: ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.

ಮಾರ್ಚ್ 23ರಂದು ಉಪ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಏಪ್ರಿಲ್ 3 ಕೊನೆಯ ದಿನವಾಗಿದೆ.

ಚುನಾವಣೆ ಘೋಷಣೆ ಆದ ದಿನದಿಂದಲೇ ಮಾದರಿ ನೀತಿಸಂಹಿತೆ ಜಾರಿಯಲ್ಲಿರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.

ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ನಿಧನದಿಂದ ಬೆಳಗಾವಿ ಲೋಕಸಭೆ ಕ್ಷೇತ್ರ ತೆರವಾಗಿದೆ.

ಪ್ರತಾಪಗೌಡ ಪಾಟೀಲ ಅವರ ರಾಜೀನಾಮೆಯಿಂದ ಮಸ್ಕಿ ವಿಧಾನಸಭೆ ಕ್ಷೇತ್ರ ಮತ್ತು ಶಾಸಕ ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರ ತೆರವಾಗಿವೆ.

ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂಧಗಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿಲ್ಲ.

ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರ ಹಾಗೂ ವಿವಿಧ ರಾಜ್ಯಗಳ ಇತರ 12 ವಿಧಾನಸಭೆ ಕ್ಷೇತ್ರಗಳಿಗೂ ಏಪ್ರಿಲ್ 17ರಂದೇ ಉಪ ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.