ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ಪರಿಷತ್‌ ಸ್ಥಾನಕ್ಕೆ ಆ.11ರಂದು ಚುನಾವಣೆ

Last Updated 18 ಜುಲೈ 2022, 14:09 IST
ಅಕ್ಷರ ಗಾತ್ರ

ಬೆಂಗಳೂರು: ಸಿ.ಎಂ.ಇಬ್ರಾಹಿಂ ಅವರ ರಾಜಿನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ ಆಗಸ್ಟ್‌ 11 ರಂದು ಉಪಚುನಾವಣೆ ನಡೆಯಲಿದೆ.

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಈ ಉಪಚುನಾವಣೆ ಸಂಬಂಧಿಸಿದಂತೆ ಇದೇ 25 ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಆಗಸ್ಟ್‌ 1 ಕೊನೆಯ ದಿನವಾಗಿದೆ. ಆ.2 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಆ.4 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ. ಆ.11 ರಂದು ಮತದಾನ ಮತ್ತು ಅದೇ ದಿನ ಸಂಜೆ ಮತಗಳ ಎಣಿಕೆ ನಡೆಯಲಿದೆ.

ಕಾಂಗ್ರೆಸ್‌ನಿಂದ ವಿಧಾನಪರಿಷತ್‌ ಸದಸ್ಯರಾಗಿದ್ದ ಇಬ್ರಾಹಿಂ ಅವರು ವಿಧಾನಪರಿಷತ್ ವಿರೋಧಪಕ್ಷದ ನಾಯಕ ಸ್ಥಾನ ನೀಡಲಿಲ್ಲ ಎಂಬ ಕಾರಣಕ್ಕೆ ಮುನಿಸಿಕೊಂಡು ಪರಿಷತ್‌ನ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದರು. ಬಳಿಕ ಅವರು ಜೆಡಿಎಸ್ ಸೇರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT