ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌: ಜೂನ್‌ 3ರಂದು ಚುನಾವಣೆ

Last Updated 10 ಮೇ 2022, 22:45 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಏಳು ಸದಸ್ಯರ ಅವಧಿ ಜೂನ್‌ 14 ಕ್ಕೆ ಮುಕ್ತಾಯವಾಗಲಿದ್ದು, ಈ ಸ್ಥಾನಗಳ ಭರ್ತಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ.

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ವೇಳಾಪಟ್ಟಿ ಪ್ರಕಟಿಸಿದೆ. ಬಿಜೆಪಿಯ ಲಕ್ಷ್ಮಣ ಸವದಿ, ಲಹರ್‌ ಸಿಂಗ್‌ ಸಿರೋಯಾ, ಕಾಂಗ್ರೆಸ್‌ನ ಆರ್‌.ಬಿ. ತಿಮ್ಮಾಪೂರ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಜೆಡಿಎಸ್‌ನ ಕೆ.ವಿ. ನಾರಾಯಣ ಸ್ವಾಮಿ ಮತ್ತು ಎಚ್‌.ಎಂ. ರಮೇಶ್‌ ಗೌಡ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಗಳಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ. ಮೇ 17 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ 24 ನಾಮಪತ್ರ ಸಲ್ಲಿಸಲು ಕೊನೆಯ ದಿನ. 25 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 27 ಕೊನೆಯ ದಿನ.

ಜೂನ್‌ 3 ರಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT