ಶನಿವಾರ, ಜೂನ್ 19, 2021
27 °C
ಆಟೊ ಅಡ್ಡಗಟ್ಟಿ ದಾಳಿ, ಚಾಲಕನಿಗೆ ಗಾಯ

ಕೊಡಗಿನಲ್ಲಿ ಕಾಡಾನೆ ದಾಳಿ: ವೃದ್ಧೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಂಟಿಕೊಪ್ಪ (ಕೊಡಗು): ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಾಡಾನೆ ದಾಳಿ ಪ್ರಕರಣಗಳು ನಡೆದಿದ್ದು ವೃದ್ಧೆಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಆಟೊ ಚಾಲಕ ಗಾಯಗೊಂಡಿದ್ದಾರೆ.

ಸಮೀಪದ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋದೂರು ಗ್ರಾಮದ ನೀನಾ (76) ಅವರು ಶನಿವಾರ ಸಂಜೆ ತಮ್ಮ ತೋಟದಲ್ಲಿ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ನೀನಾ ಅವರು ಕತ್ತಲಾದರೂ ಮನೆಗೆ ಬಾರದಿದ್ದಾಗ ಮನೆಯವರು ಹುಡುಕಾಟ ನಡೆಸಿದರು. ಆಗ ಆನೆ ದಾಳಿಯಿಂದ ಸಾವನ್ನಪ್ಪಿರುವುದು ಗೊತ್ತಾಗಿದೆ.

ಮಳೂರು ಗ್ರಾಮದ ನಿವಾಸಿ, ಆಟೊ ಚಾಲಕ ಬಾಬು ಅವರು ಸಮೀಪದ ಅಂದಗೋವೆ -ಕಲ್ಲೂರು ಸೇರುವ ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಇಬ್ಬರು ಪ್ರಯಾಣಿಕರೊಂದಿಗೆ ಬರುತ್ತಿದ್ದ ವೇಳೆ ಕಾಡಾನೆಯೊಂದು ಆಟೊ ಅಡ್ಡಗಟ್ಟಿ ದಾಳಿ ನಡೆಸಿದೆ.

ಆಟೊ ಚಾಲಕ, ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಕುಶಾಲನಗರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು