ಗುರುವಾರ , ಸೆಪ್ಟೆಂಬರ್ 23, 2021
26 °C
ರಾಷ್ಟ್ರೋತ್ಥಾನ ಗೋಶಾಲೆಗೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ

ಅಂತರ್ಜಲ ಮರುಪೂರಣಕ್ಕೆ ಒತ್ತು: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ಯೋಜನೆಯಂತೆ ಮಳೆ ನೀರನ್ನು ಭೂಮಿಯಲ್ಲಿ ಇಂಗಿಸುವ ಮೂಲಕ ಅಂತರ್ಜಲ ಮರುಪೂರಣ ಎಂಬ ಕಾರ್ಯಕ್ರಮದಡಿ ರಾಜ್ಯದ ಎಲ್ಲ ಕೆರೆಕಟ್ಟೆ, ಕಲ್ಯಾಣಿಗಳನ್ನು ನರೇಗಾ ಅಡಿಯಲ್ಲಿ ಅಂತರ್ಜಲ ಮರುಪೂರಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಅವರು ತಾಲ್ಲೂಕಿನ ಎಸ್.ಎಸ್. ಘಾಟಿಯಲ್ಲಿರುವ ರಾಷ್ಟ್ರೋತ್ಥಾನ ಗೋಶಾಲೆ ಮಾಧವ ಸೃಷ್ಟಿಗೆ ಶನಿವಾರ ಭೇಟಿ ನೀಡಿ ಗೋ ಮಾತೆಗೆ ಪೂಜೆ ಸಲ್ಲಿಸಿ, ಗಿಡ ನೆಟ್ಟರು.

ರಾಜ್ಯದ ಎಲ್ಲ ಕೆರೆ ಕಟ್ಟೆಗಳು, ಕಲ್ಯಾಣಿಗಳನ್ನು ನರೇಗಾ ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದ್ದು,
ಇಡೀ ದೇಶದಲ್ಲಿ ನರೇಗಾ ಕಾಮಗಾರಿ ಮುಖಾಂತರ ಕರ್ನಾಟಕ ದೇಶದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ‌. ನರೇಗಾದಡಿ ದುಡಿಯುವುದಕ್ಕೆ ಕೂಲಿ ಎಂದು ಹೇಳುವುದಕ್ಕೆ ಇಷ್ಟ ಪಡುವುದಿಲ್ಲ. ಯುದ್ಧ ಭೂಮಿಯಲ್ಲಿ ಸೈನಿಕರು ಕರ್ತವ್ಯ ನಿರ್ವಹಿಸುವ ರೀತಿಯಲ್ಲಿಯೇ ಸಮಾಜದಲ್ಲಿ ಬಡವರು ಕೂಡ ಸೈನಿಕರ ರೂಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೆಮ್ಮೆಯಿಂದ ಹೇಳಬಹುದು ಎಂದರು.

’ನಾವೆಲ್ಲರೂ ಪರಿಸರ ಬೆಳೆಸಲು, ಕೆರೆ ಮತ್ತು ಕಲ್ಯಾಣಿಗಳು ಅಭಿವೃದ್ಧಿ ಮಾಡಲು ಈ ಸ್ಥಳ ಸ್ಫೂರ್ತಿ ನೀಡುತ್ತದೆ. ಇಲ್ಲಿ ತರಬೇತಿ ಕೇಂದ್ರ ತೆರೆಯಬೇಕೆಂಬ ತೀರ್ಮಾನ ಕೈಗೊಂಡಿರುವುದಾಗಿ’ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು