ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಮನೆ ಮೇಲಿನ ಸಿಬಿಐ ದಾಳಿ ಮುಕ್ತಾಯ: ₹ 57 ಲಕ್ಷ ನಗದು, ದಾಖಲೆಗಳ ವಶ

Last Updated 5 ಅಕ್ಟೋಬರ್ 2020, 13:36 IST
ಅಕ್ಷರ ಗಾತ್ರ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಆರಂಭಿಸಿದ್ದ ಶೋಧ ಕಾರ್ಯಾಚರಣೆ ಅಂತ್ಯಗೊಂಡಿದೆ. ದಾಳಿ ವೇಳೆ ₹ 57 ಲಕ್ಷ ಮತ್ತು ಹಲವು ದಾಖಲೆಗಳನ್ನು ತನಿಖಾ ತಂಡ ವಶಕ್ಕೆ ಪಡೆದಿದೆ.

₹ 74.93 ಕೋಟಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಶಿವಕುಮಾರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕದ ಒಂಭತ್ತು, ದೆಹಲಿಯ ನಾಲ್ಕು ಮತ್ತು ಮುಂಬೈನ ಒಂದು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಾಳಿ ವೇಳೆ ₹ 57 ಲಕ್ಷ ನಗದು, ಆಸ್ತಿ ಒಡೆತನಕ್ಕೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ದಾಖಲೆಗಳು ಮತ್ತು ಕಂಪ್ಯೂಟರ್ ಹಾರ್ಡ್ ಡಿಸ್ಕ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT