ಮಂಗಳವಾರ, ಆಗಸ್ಟ್ 9, 2022
23 °C

ಜಾರ್ಜ್ ಶೀಟ್ ಸಲ್ಲಿಕೆ ತಡವಾಗಿದೆ: ಡಿ.ಕೆ.ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತುಂಬಾ ತಡವಾಗಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಚಾರ್ಜ್‌ ಶೀಟ್‌ ಸಲ್ಲಿಕೆಯಾಗಿದೆ. ಇದು ಮೂರ್ನಾಲ್ಕು ವರ್ಷದ ಹಿಂದೆಯೇ ಆಗಬೇಕಾಗಿತ್ತು. ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಇನ್ನೂ ಚಾರ್ಜ್‌ಶೀಟ್‌ ನೋಡಿಲ್ಲ. ಕಾರಾಗೃಹದಲ್ಲಿ ಇರಬೇಕಾದರೆ, ಜೈಲಿನಿಂದ ಹೊರ ಬಂದ ಆರು ತಿಂಗಳ ಒಳಗಡೆ ಹಾಕಬೇಕಿತ್ತು ಎಂದರು.

ಇದನ್ನೂ ಓದಿ: 

ಪರಿಷ್ಕೃತ ಪಠ್ಯಪುಸ್ತಕದ ಮೂಲಕ ಸಂವಿಧಾನ ಶಿಲ್ಪಿ ಅಂಬೇಡ್ಕರ್‌, ಬಸವಣ್ಣ, ಶಂಕರಾಚಾರ್ಯ, ಕುವೆಂಪು, ನಾರಾಯಣಗುರು ಸೇರಿದಂತೆ ಅನೇಕ ಮಹನೀಯರಿಗೆ ಅವಮಾನ ಮಾಡಿದ್ದಾರೆ. ಇದನ್ನು ಸಹಿಸಿಕೊಂಡು ಇರಲು ಸಾಧ್ಯವೇ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಸ್ವಾಮೀಜಿ ಇದ್ದರು ಎನ್ನುವ ಕಾರಣಕ್ಕೆ ಸುಮ್ಮನಿದ್ದೆ, ಬೇರೆ ಕಡೆ ಆದರೆ ಪಠ್ಯಪುಸ್ತಕ ಹರಿದು ಹಾಕುವುದಲ್ಲ ಸುಡುತ್ತಿದ್ದೆ. ಮುಂದಕ್ಕೂ ಅಂತ ಕಾಲ ಬರುತ್ತದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು