ಶನಿವಾರ, ಆಗಸ್ಟ್ 20, 2022
21 °C

ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಂಜಿನಿಯರಿಂಗ್ ವ್ಯಾಸಂಗಕ್ಕಾಗಿ ಹೊರ ರಾಜ್ಯದಿಂದ ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ‌ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

‘ಈ ಸಂಬಂಧ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.

‘ನಗರ ಕಾಲೇಜೊಂದರಲ್ಲಿ ಎಂಜಿನಿಯರಿಂಗ್‌ ಸೇರಲು ಬಂದಿದ್ದ ವಿದ್ಯಾರ್ಥಿನಿಗೆ ಹಾಗೂ ಅವರ ಕುಟುಂಬಸ್ಥರಿಗೆ ಅದೇ ರಾಜ್ಯ
ದವನಾದ ಆರೋಪಿ ಪರಿಚಯವಾಗಿದ್ದ. ಎಂಜಿನಿಯರಿಂಗ್‌ ಪ್ರವೇಶ ಸಂಬಂಧ ಯುವಕನನ್ನು ಮಂಗಳವಾರ ಭೇಟಿಯಾಗಿ ಚರ್ಚಿಸಿದ್ದಳು. ಕಾಲೇಜಿಗೆ ಪ್ರವೇಶ ಶುಲ್ಕ ಪಾವತಿ ಮಾಡಲು ಬುಧವಾರ ತೆರಳಿದ್ದಾಗ, ಆಕೆಯ ಮೇಲೆ ಅತ್ಯಾಚಾರ ನಡೆದಿದೆ’ ಎಂದು ಮಾಹಿತಿ ನೀಡಿದರು.

‘ಪ್ರಜ್ಞೆ ಕಳೆದುಕೊಂಡಿದ್ದ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಯುವಕ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಆದರೆ, ಆಕೆ ಮನೆಯಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಪ್ರಕರಣ ಸಂಬಂಧ ಯುವಕನನ್ನು ವಶಕ್ಕೆ ಪಡೆದು, ತನಿಖೆ ಮುಂದುವರಿಸಿದ್ದೇವೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು