ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶ ಶುಲ್ಕವು ಈ ವರ್ಷದಿಂದ ಹೆಚ್ಚಳವಾಗುವ ಸಾಧ್ಯತೆಯಿದೆ.
ಶುಲ್ಕ ಹೆಚ್ಚಳ ಸಂಬಂಧ ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.
ಅನುದಾನರಹಿತ ಖಾಸಗಿ ಎಂಜಿನಿಯ ರಿಂಗ್ ಕಾಲೇಜು ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಭಂಡಾರಿ ಪ್ರತಿಕ್ರಿಯಿಸಿ, ‘ಶೇ 15ರಷ್ಟು ಶುಲ್ಕ ಹೆಚ್ಚಿಸುವಂತೆ ಕಳೆದ ವರ್ಷವೇ ಮನವಿ ಸಲ್ಲಿಸಿದ್ದೆವು.
ಆದರೆ, ಕೋವಿಡ್ ಕಾರಣಕ್ಕೆ ಹಿಂದಿನ ವರ್ಷದ ಶುಲ್ಕವನ್ನೇ ಮುಂದುವರಿಸಲಾಗಿತ್ತು. ಈ ಶೈಕ್ಷಣಿಕ ಸಾಲಿನಿಂದ ಶೇ 10ರಷ್ಟು ಶುಲ್ಕ ಹೆಚ್ಚಿಸುವುದು ಅನಿವಾರ್ಯ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.