ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊರಗುತ್ತಿಗೆ ಆಧಾರದಲ್ಲಿ 990 ಎಂಜಿನಿಯರ್‌ಗಳ ನೇಮಕ: ಕಾರಜೋಳ

Last Updated 22 ಡಿಸೆಂಬರ್ 2020, 19:35 IST
ಅಕ್ಷರ ಗಾತ್ರ

ಧಾರವಾಡ: ‘ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ 990 ಎಂಜಿ ನಿಯರ್‌ಗಳ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರಿ ಏಜೆನ್ಸಿಗಳ ಮೂಲ ಕವೇ ಹೊರಗುತ್ತಿಗೆ ಆಧಾರದಲ್ಲಿ ತೆಗೆದುಕೊಳ್ಳಲಾಗುತ್ತಿದ್ದು, ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು. ಉತ್ತರ ವಲಯದಲ್ಲಿ 350 ಎಂಜಿನಿಯರ್‌ಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಕಿರಿಯ ಹಾಗೂ ಸಹಾಯಕ ಎಂಜಿನಿಯರ್‌ಗಳನ್ನು ನೇಮಿಸಿಕೊಳ್ಳಲು ಆಯಾ ವಲಯಗಳಿಗೆ ಸೂಚಿಸಲಾಗಿದೆ’ ಎಂದರು.

‘ಪ್ರವಾಸಿ ತಾಣಗಳಿರುವ ಜಿಲ್ಲೆಗಳ ಲ್ಲಿನ ಲೋಕೋಪಯೋಗಿ ಇಲಾ ಖೆಯ ನಿರೀಕ್ಷಣಾ ಮಂದಿರಗಳನ್ನು ಪ್ರವಾಸೋದ್ಯಮ ಇಲಾಖೆಗೆ ಬಾಡಿಗೆ ರೂಪದಲ್ಲಿ ನೀಡಲು ನಿರ್ಧರಿಸಲಾಗಿದೆ. ಇದರಿಂದ ಇಲಾಖೆಗೆ ಆದಾಯವೂ ಸಿಗಲಿದೆ. ಜತೆಗೆ ಬರುವ ಪ್ರವಾಸಿಗರಿಗೆ ತಂಗಲು ಸುಸಜ್ಜಿತ ಕೊಠಡಿಗಳು ಲಭ್ಯ ವಾಗಲಿವೆ. ಆದರೆ ಸರ್ಕೀಟ್ ಹೌಸ್‌ ಗಳನ್ನು ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಕೋವಿಡ್‌–19 ಸೋಂಕು, ಪ್ರಕೃತಿ ವಿಕೋಪದಿಂದಾಗಿ ಸರ್ಕಾರದ ಆದಾಯ ಕಡಿಮೆಯಾಗಿದೆ.ಇಲಾಖೆಯಿಂದ ಡಿ. 1 ರವರೆಗೆ ₹5,552 ಕೋಟಿಬಾಕಿ ಇದೆ. ಇವುಗಳನ್ನು ಹಂತಹಂತವಾಗಿ ಬಿಡುಗಡೆ ಮಾಡಲಾಗುವುದು’ ಎಂದರು.

‘ಅತಿವೃಷ್ಟಿಯಿಂದ ಹಾನಿಗೀಡಾದ ರಸ್ತೆಗಳ ತಾತ್ಕಾಲಿಕ ದುರಸ್ತಿ ಕಾರ್ಯ ಶೇ 70ರಷ್ಟು ಪೂರ್ಣಗೊಂಡಿದೆ. ಇವು ಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ’ ಎಂದು ಕಾರಜೋಳ ಹೇಳಿದರು.‌

‘ವಿಜಯಪುರ ಜಿಲ್ಲೆಯ ಬುರಾನ್‌ಪುರ ಗ್ರಾಮದಲ್ಲಿ ಹೊಸ ವಿಮಾನ ನಿಲ್ದಾಣ ಕಾಮಗಾರಿಗೆ ಶೀಘ್ರದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. ₹220 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆಯಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT