ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕಾತಿ ಪರೀಕ್ಷೆ: ಅಕ್ರಮ ತಡೆಗೆ ಇಎನ್‌ಟಿ ತಜ್ಞರು

ರಾಜ್ಯದಲ್ಲಿಯೇ ದಾವಣಗೆರೆಯಲ್ಲಿ ಪ್ರಥಮ ಬಾರಿಗೆ ತಪಾಸಣೆ
Last Updated 12 ಮೇ 2022, 23:00 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ ಇದೇ 21 ಮತ್ತು 22ರಂದು ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಗಳನ್ನು ತಡೆಯಲು ಜಿಲ್ಲಾಡಳಿತ ನೂತನ ಕ್ರಮ ಕೈಗೊಂಡಿದೆ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವ ಮುಂಚೆ ಕಿವಿ, ಮೂಗು, ಗಂಟಲು ತಜ್ಞರು ತಪಾಸಣೆ ಮಾಡಲಿದ್ದಾರೆ.

‘ಜಿಲ್ಲೆಯಲ್ಲಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ 600 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಇರಲಿದ್ದಾರೆ. ಪ್ರತಿ ಕೇಂದ್ರಕ್ಕೆ ಒಬ್ಬ ಇಎನ್‌ಟಿ ತಜ್ಞರನ್ನು ನಿಯೋಜನೆ ಮಾಡುತ್ತಿದ್ದೇವೆ’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ‘‍ಪ್ರಜಾವಾಣಿ’ಗೆ ತಿಳಿಸಿದರು.

‘ಪರೀಕ್ಷಾ ಕೇಂದ್ರದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗುವುದು. ಪರೀಕ್ಷಾರ್ಥಿಯು ದೇಹದ ಯಾವುದೇ ಭಾಗ
ದಲ್ಲಿ, ಮುಖ್ಯವಾಗಿ ಕಿವಿಯಲ್ಲಿ ಯಾವುದೇ ಸಾಧನ ಇಟ್ಟುಕೊಂಡು ಪರೀಕ್ಷಾ ಕೇಂದ್ರಕ್ಕೆ ಬಾರದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.

‘ಕೊಠಡಿ ಮೇಲ್ವಿಚಾರಕರು ಹಾಗೂ ಅಭ್ಯರ್ಥಿಗಳು ಮೊಬೈಲ್, ಎಲೆಕ್ಟ್ರಾನಿಕ್ ವಾಚ್ ಸೇರಿ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ಜಾಮಿಟ್ರಿ ಬಾಕ್ಸ್ ಇದ್ದಲ್ಲಿ ತಪಾಸಣೆಗೊಳಪಡಿಸಿ ರೇಖಾಗಣಿತ ಪರಿಕರಗಳನ್ನು ಮಾತ್ರ ಒಯ್ಯಲು ಅನುಮತಿ ನೀಡಲಾಗುವುದು. ಅದನ್ನು ಹೊರತುಪಡಿಸಿ ಬೇರೇನಾದರೂ ಇದ್ದಲ್ಲಿ ತಕ್ಷಣ ಅವರನ್ನು ಪರೀಕ್ಷೆಯಿಂದ ಅಮಾನತು ಮಾಡಲಾಗುವುದು. ಪರೀಕ್ಷಾ ಆವರಣ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪಿಎಸ್‌ಐ ನೇಮಕಾತಿ ಸಹಿತ ಕೆಲವು ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೀಗೆ ಆಗಬಾರದು ಎಂದು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಣ್ಣ ಸಂದೇಹ ಕಂಡುಬಂದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT