ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಆರ್.ಎನ್. ಶೆಟ್ಟಿ ನಿಧನ

ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ
Last Updated 17 ಡಿಸೆಂಬರ್ 2020, 2:31 IST
ಅಕ್ಷರ ಗಾತ್ರ

ಬೆಂಗಳೂರು; ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಆರ್.ಎನ್. ಶೆಟ್ಟಿ (92) ಗುರುವಾರ ಡಿ.17ರ ನಸುಕಿನ 2 ಗಂಟೆ ಸುಮಾರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು. ಬಳಿಕ ಅಂತ್ಯಸಂಸ್ಕಾರವನ್ನು ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ ಆರ್.ಎನ್. ಶೆಟ್ಟಿ ಅವರು ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿದಂತೆ ವಿವಿಧ ರಂಗಗಳಲ್ಲಿ ತೊಡಗಿಸಿಕೊಂಡಿದ್ದರು.

1961ರಲ್ಲಿ ಮೂಲಸೌಕರ್ಯ ಕಂಪನಿ ಹುಟ್ಟು ಹಾಕಿದ ಆರ್.ಎನ್. ಶೆಟ್ಟಿ ಅವರು, ಹಿಡಕಲ್ ಜಲಾಶಯ, ತಟ್ಟಿಹಳ್ಳ ಜಲಾಶಯ, ಸೂಪ ಜಲಾಶಯ, ಗೇರುಸೊಪ್ಪ ಜಲಾಶಯ, ಮಾಣಿ ಅಣೆಕಟ್ಟೆ, ವಾರಾಹಿ ಜಲ ವಿದ್ಯುತ್ ಯೋಜನೆ, ಕೊಂಕಣ ರೈಲು ಸುರಂಗ, ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವೇ ಮೊದಲಾದ ಹಲವು ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT