ಬೆಂಗಳೂರು: 'ದೇಶದ ಆರ್ಥಿಕತೆಯನ್ನು ನರೇಂದ್ರ ಮೋದಿ ಸರ್ಕಾರ ಇನ್ನಷ್ಟು ಪ್ರಪಾತಕ್ಕೆ ತಳ್ಳಿರುವುದು ಅಂಕಿ–ಅಂಶ ಸಮೇತ ರುಜುವಾತಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ದೇವರ ಆಟ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ದೇಶದ ಜಿಡಿಪಿ ಶೇ 23.9ರಷ್ಟು ಋಣಾತ್ಮಕ ಕುಸಿತ ಕಂಡಿದ್ದು, ಇದು ಸಾರ್ವಕಾಲಿಕ ಕುಸಿತ ಎಂದೇ ತಜ್ಙರು ಅಭಿಪ್ರಾಯ ಪಟ್ಟಿದ್ದಾರೆ’ ಎಂದಿದ್ದಾರೆ.

‘ದೇಶದಲ್ಲಿ ಎಲ್ಲವೂ ಸರಿ ಇದೆ ಎಂಬಂತೆ ಬಿಂಬಿಸುತ್ತಾ ಕೇವಲ ಚಪ್ಪಾಳೆ ಹೊಡೆದು ದೀಪ ಹಚ್ಚಿ ಭಾವನಾತ್ಮಕ ವಿಷಯಗಳನ್ನೇ ಮುಂದಿಟ್ಟು ಇನ್ನೆಷ್ಟು ದಿನ ಜನರನ್ನು ಕತ್ತಲಲ್ಲಿಡುತ್ತೀರಿ ಪ್ರಧಾನಿಗಳೇ... ಉತ್ತರಿಸಿ’ ಎಂದೂ ಕೆಣಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.